Breaking News

ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಾಲನೆ – ಡಿವೈಡರ್‌ಗೆ ಡಿಕ್ಕಿ, ತಾಯಿ, ಇಬ್ಬರು ಮಕ್ಕಳು ಸಾವು

Spread the love

ವಿಜಯಪುರ: ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಡಿವೈಡರ್‌ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮನಗೂಳಿ  ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ.

ತಾಯಿ ಸತ್ಯವೇಣಿ (38), ಪುತ್ರ ಹರಿವೆಂಕಟರಾಮ್ (20), ಜಶ್ವಂತ (18) ಮೃತರು. ತಂದೆ ರಾಘವೇಂದ್ರ ಅವರು (41) ಗಂಭೀರವಾಗಿ ಗಾಯಗೊಂಡಿದ್ದಾರೆ.

KA 33 N 4689 ನಂಬರ್‌ನ ಕ್ರೇಟಾ ಕಾರು ಅಪಘಾತಕ್ಕೆ ಒಳಗಾಗಿದೆ‌. ಕುಟುಂಬಸ್ಥರು ಎಲ್ಲರೂ ಸೇರಿ ಕಾರಿನಲ್ಲಿ ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದರು. ಮೃತ ಹರಿವೆಂಕಟರಾಮ್ ಕಾರು ಚಲಾಯಿಸುತ್ತಿದ್ದ. ಆದರೆ ಹಿಂದಿನ ದಿನ ರಾತ್ರಿಯಿಡೀ ನಿದ್ದೆಗೆಟ್ಟು ಕುಟುಂಬಸ್ಥರು ಸೇರಿಕೊಂಡು ಸಾಮಾನು ಪ್ಯಾಕ್‌ ಮಾಡಿಕೊಂಡಿದ್ದಂತೆ.ನಿದ್ದೆಯ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ.ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ