Breaking News

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗೂ ಮೊದಲೇ ಪಲಿತಾಂಶ ಡೇಟ್ ಪ್ರಕಟಿಸಿದ ಶಿಕ್ಷಣ ಇಲಾಖೆ

Spread the love

ಬೆಂಗಳೂರು:2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ  ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಫೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಮತ್ತು ಮಾ.18ರಿಂದ ಏ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುತ್ತಿದೆ. ದ್ವಿತೀಯ ಪಿಯುಸಿಗೆ 6,46,801 ಹೊಸಬರು (್ರೆಷರ್ಸ್), 50,540 ಪುನರಾವರ್ತಿತ ಮತ್ತು 13,022 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 7.10 ಲಕ್ಷ ವಿದ್ಯಾರ್ಥಿಗಳು ಪಿಯುಸಿಗೆ ನೋಂದಣಿ ಮಾಡಿಕೊಂಡಿದ್ದರು.
ಎಸ್‌ಎಸ್‌ಎಲ್‌ಸಿಗೆ 8,12,855 ಹೊಸಬರು, 62,845 ಪುನರಾವರ್ತಿತ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 8.96 ಲಕ್ಷ ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗಿನ ದಾಖಲೆಯಾಗಿತ್ತು ಎಂದು ಹೇಳಿದರು.

ಸಂಭಾವ್ಯ ಪಲಿತಾಂಶ ದಿನಾಂಕ

ಏ.7ರಂದು ದ್ವಿತೀಯ ಪಿಯುಸಿ ಮತ್ತು ಏ.24ರಂದು ಎಸ್‌ಎಸ್‌ಎಲ್‌ಸಿ ಲಿತಾಂಶ ನೀಡುವ ಸಂಭಾವ್ಯ ದಿನಾಂಕವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಇದೇ ವೇಳೆ ಪ್ರಕಟಿಸಿದರು.

Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ