Breaking News

ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Spread the love

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. ಜನತೆ ನಗರಗಳಿಂದ ಹಳ್ಳಿಗೆ ಹೋಗದೆ ಸಹಕರಿಸಬೇಕು ಎಂದು ಸಿಎಂ ವಿನಂತಿಸಿದರು.

ಸಚಿವರಾದ ಬಸವರಾಜ ಬೊಮ್ಮಾಯಿ, ಅಶ್ವತ್ಥ ನಾರಾಯಣ, ಡಾ.ಸುಧಾಕರ, ಹಿರಿಯ ವೈದ್ಯ. ಡಾ.ದೇವಿ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ