Breaking News

ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್

Spread the love

ನವದೆಹಲಿ: ನಾನು ರಾಜಕೀಯದಿಂದ ನಾಪತ್ತೆಯಾಗಿಲ್ಲ, ಎಲ್ಲರೂ ಸೇರಿ ಕೋರ್ಟ್ ಕೇಸ್‌ಗಳಲ್ಲಿ  ಸಿಲುಕಿಸಿದ್ದರು ನಿಧಾನವಾಗಿ ಅವುಗಳಿಂದ ಆಚೆ ಬರುತ್ತಿದ್ದೇನೆ. ರಾಜಕೀಯ ನನ್ನ ರಕ್ತದಲ್ಲಿದೆ, ವಿದ್ಯಾರ್ಥಿ ಜೀವನದಿಂದ ರಾಜಕೀಯ ಮಾಡುತ್ತಿದ್ದೇನೆ. ಮುಂದೆ ನಾನು ಸಕ್ರೀಯ ರಾಜಕೀಯಕ್ಕೆ ಮರಳುತ್ತೇನೆ ಎಂದು ಮಾಜಿ ಸಚಿವ ರೋಷನ್ ಬೇಗ್  ಹೇಳಿದ್ದಾರೆ.

ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ಬಳಿಕ ಮಾತಮಾಡಿದ ಅವರು ಅವರು, ನಾನು ಚಿಕ್ಕಪ್ಪ ದೊಡ್ಡಪ್ಪ ಮೂಲಕ ರಾಜಕೀಯಕ್ಕೆ ಬಂದಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ, ಈಗ ರಾಜಕೀಯದಲ್ಲಿ ಸಕ್ರಿಯವಾಗುತ್ತಿದ್ದೇನೆ ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತೇನೆ ಆಮೇಲೆ ಹೇಳುತ್ತೇನೆ ನಾನು ಮನೆಯಲ್ಲಿ ಮಲಗಲ, ರಾಜಕೀಯಕ್ಕೆ ಮರಳುತ್ತೇನೆ ಎಂದು ಹೇಳಿದ್ದಾರೆ.

ದೇಶದ್ಯಾಂತ ಮುಸ್ಲಿಂ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ಇಂಡಿಯನ್ ಮುಸ್ಲಿಂ ಫಾರ್ ಫ್ರೋಗೇಸ್ ಆ್ಯಂಡ್ ರಿಫಾರ್ಮ್ಸ್ ಕಡೆಯಿಂದ ದೇಶದ ಪ್ರಮುಖ ಮುಸ್ಲಿಂ ನಾಯಕರ ನಿಯೋಗ ಕೇಂದ್ರ ಸಚಿವರನ್ನು ಭೇಟಿ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

ಉತ್ತರಾಖಂಡ, ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ, ಅಸ್ಸಾಂ ಸಿಎಂ ಮುಸ್ಲಿಂಮರತ್ತ ಗನ್ ತೋರಿಸುತ್ತಾರೆ, ಉತ್ತರ ಪ್ರದೇಶ ಉತ್ತಾರಖಂಡದಲ್ಲೂ ಇಂತಹದೇ ಪರಿಸ್ಥಿತಿಗಳಿದೆ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಮನವಿ ಮಾಡಿದ್ದೇವೆ. ಮುಂದೆ ಗೃಹ ಮಂತ್ರಿ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದೇವೆ ಎಂದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ