Breaking News

ಸ್ಟಿಂಗ್ ಆಪರೇಷನ್, ಪೆನ್‌ಡ್ರೈವ್ ಪಿತಾಮಹ ಕುಮಾರಸ್ವಾಮಿ: ಬಾಲಕೃಷ್ಣ

Spread the love

ಬೆಂಗಳೂರು: ಸ್ಟಿಂಗ್ ಆಪರೇಷನ್, ಪೆನ್‌ಡ್ರೈವ್ ಪಿತಾಮಹ ಕುಮಾರಸ್ವಾಮಿ  ಅಂತಾ ಸಚಿವ ಹೆಚ್‌. ಸಿ ಬಾಲಕೃಷ್ಣ  ವ್ಯಂಗ್ಯವಾಡಿದ್ದಾರೆ.

ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್  ವೀಡಿಯೋ ಕೊಟ್ಟು ಡಿಕೆಶಿ  ಸಿಎಂ ಆಗಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆರೋಪಕ್ಕೆ ಬಾಲಕೃಷ್ಣ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಅವರು ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ. ಹುಷಾರಾಗಿರಿ, ಎಚ್ಚರದಿಂದ ಇರಿ ಎಂದು ಹೇಳಿದ್ದಾರೆ. ಆದರೆ, ಕುಮಾರಸ್ವಾಮಿಗೆ ಹೆದರಿಕೊಳ್ಳಿ ಎಂದು ಸಿಎಂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಅವರು ಸುಮ್ಮನೆ ಏನೇನೋ ಮಾತನಾಡಬಾರದು. ಡಿಕೆ ಶಿವಕುಮಾರ್ ಸಿಎಂ ಆದಾಗಿನಿಂದಲೇ ಕುಮಾರಸ್ವಾಮಿ ಸ್ಟಿಂಗ್ ಆಪರೇಷನ್ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ. ಅವರೇ ಸ್ಟಿಂಗ್ ಆಪರೇಷನ್ ಮಾಡಿಸುತ್ತಾರೆ. ಹೆಸರು ಹೇಳಬೇಕಾ ಎಂದು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

Spread the loveಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ