Breaking News

ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ಸೆ.30ರವರೆಗೆ ನಿಷೇಧ

Spread the love

ಉಗರಗೋಳ: ‘ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ಸೆ.30ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತರು ಸಹಕಾರ ನೀಡಬೇಕು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.

‘ದೇಶದ ನಾನಾ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ. ಈ ಕಾರಣದಿಂದ ಕೋವಿಡ್ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಜನರ ಹಿತದೃಷ್ಟಿಯಿಂದ ಅವಕಾಶ ಕೊಡುತ್ತಿಲ್ಲ’ ಎಂದು ತಿಳಿಸಿದರು.

‘ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು. ಭಕ್ತರಿಗೋಸ್ಕರ 265 ಕೊಠಡಿಗಳ ನಿರ್ಮಾಣ ಕಾಮಗಾಗಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ’ ಎಂದರು.

ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ‘ಯಲ್ಲಮ್ಮನಿಗೆ ಎಂದಿನಂತೆ ಅಭಿಷೇಕ, ವಿಶೇಷ ಪೂಜೆ ನೆರವೇರುತ್ತಿದೆ. ಲಾಕ್‌ಡೌನ್ ಪ್ರಾರಂಭ ಆದಾಗಿನಿಂದ ಈವರೆಗೆ ದೇವಸ್ಥಾನಕ್ಕೆ ₹ 8 ಕೋಟಿ ನಷ್ಟವಾಗಿದೆ’ ಎಂದು ತಿಳಿಸಿದರು.

ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜಿರಗ್ಯಾಳ, ವೆಂಕಟ ಸೂನ್ನದ, ಸವದತ್ತಿ ಎಎಸ್‌ಐ ಎಸ್.ಆರ್. ಗಿರಿಯಾಲ, ರಾಮಾಚಾರಿ ಲಮಾಣಿ, ಸದಾನಂದ ಈಟಿ, ಈರಣ್ಣ ಕುಲಕರ್ಣಿ, ಪಂಡಿತ ರಾಜಶೇಖರಯ್ಯ, ಮಂಜನಗೌಡ ಸಂದಿಮನಿ ಇದ್ದರು.


Spread the love

About Laxminews 24x7

Check Also

ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ.‌ ನಿರಂತರ ಮಳೆಯಿಂದ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

Spread the love ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ ಅಲರ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ