Breaking News

ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ

Spread the love

ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ

ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು.

‘ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಇದರಿಂದ ನಶಿಸಿ ಹೊಗುತ್ತಿರುವ ಕಬಡ್ಡಿ ಪುನಃ ಜನಪ್ರಿಯತೆ ಪಡೆಯಲಿದೆ. ಈ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ’ ಎಂದರು.

‘ ಕ್ರೀಡೆಗೆ ಕಳೆದ ಎರಡೂವರೆ ದಶಕಗಳಿಂದ ನಮ್ಮ ತಂದೆಯವರಾದ ಸತೀಶ್ ಜಾರಕಿಹೊಳಿ ಅವರು, ನಿರಂತರ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ‌. ಅವರ ಮಾರ್ಗದರ್ಶನದಲ್ಲಿ ನಾವು ಕೂಡಾ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುವ ದಿಶೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಹೇಳಿದರು.

‘ ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಒಂದು ಆಟವಾಗಿದೆ. ತನ್ನದೇ ಆದ ವೈಶಿಷ್ಟತೆ ಹೊಂದಿರುವ ಕಬಡ್ಡಿ ಆಟಗಾರಿಗೆ ದೈಹಿಕ ಶಕ್ತಿ ಬೆಳೆಯಲು ಸಹಾಯಕವಾಗುವ ಜತೆಗೆ ಚತುರತೆ ಬೆಳೆಸುತ್ತದೆ’ ಎಂದು ತಿಳಿಸಿದರು.

ಇದೇ ವೇಳೆ ಗ್ರಾಮಸ್ಥರು, ಮುಖಂಡರು ರಾಹುಲ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಚನಗೌಡ ದ್ಯಾಮನಗೌಡ, ಅಶ್ವಥ್ ವೈದ್ಯ, ವಿಶ್ವಾಸ್ ವೈದ್ಯ, ಚಂದ್ರಣ್ಣ ಶಾಮರಾಯ್, ತಾಲ್ಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲು ಜಕಾತಿ, ಪಾಂಡು ಮನ್ನಿಕೇರಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ