ಮೈಸೂರು: ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರಾ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆದಿದೆ. ಇದರಿಂದ ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ.
ಜಾತ್ರೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಈ ವೇಳೆ, ಪರಸ್ಪರ ಕಲ್ಲು ತೂರಾಟ ನಡೆದಿದೆ. ಇದರಿಂದ ಆನಂದ್, ಭರತ್, ಅಭಿ ಹಾಗೂ ಮಗುವಿಗೆ ಗಾಯವಾಗಿದೆ. ಗಾಯಾಳುಗಳಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಲಾಟೆ ನಡೆದಿದ್ದರಿಂದ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿ ರಥೋತ್ಸವ ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಮೆರವಣಿಗೆ ವೇಳೆ ಸೂಕ್ತ ಪೊಲೀಸ್ ಭದ್ರತೆ ಇರಲಿಲ್ಲ. ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಬೇಕು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Laxmi News 24×7