Breaking News

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ

Spread the love

ಬಾಗಲಕೋಟೆ: ಶಿವಾಜಿ ಜಯಂತಿ  ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ.

ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ.

ಮಸೀದಿ‌ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್‌ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಪಬ್ಲಿಕ್‌ ಟಿವಿಗೆ ತಿಳಿಸಿದ್ದಾರೆ.

ಕಲ್ಲು ತೂರಿದ ಬೆನ್ನಲ್ಲೇ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಜನರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡುತ್ತಿದೆ: ಚರಂತಿಮಠ

Spread the loveಬಾಗಲಕೋಟೆ: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಎನ್.ಎಸ್.ಯುಐ ಕಾರ್ಯಕರ್ತರನ್ನ, ಹಿಂದೂ ಅಲ್ಲದ ಯುವಕರನ್ನ ಕೇಸರಿ ಶಾಲು ಹಾಕಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ