Breaking News

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the love

ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು  ಬಂಧಿಸಿದ್ದಾರೆ.

ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆಯ ಮೊಹಮ್ಮದ್ ಸಿನಾನ್ (20) ಬಂಧಿತ ಆರೋಪಿ. ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೆ.29 ರಂದು ಮಧ್ಯಾಹ್ನ 1:30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದಿದ್ದ ಅಪರಿಚಿತರು, ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರನ್ನು ಪತ್ತೆಹಚ್ಚಿ, ಪ್ರಮುಖ ಆರೋಪಿ ಮೊಹಮ್ಮದ್ ಸಿನಾನ್‌ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love

About Laxminews 24x7

Check Also

ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

Spread the loveಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ  ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ