Breaking News

ಮನೆಮುಂದೆ ಆಟವಾಡ್ತಿದ್ದಾಗ ಬೀದಿ ನಾಯಿಗಳು ದಾಳಿ – 4 ವರ್ಷದ ಬಾಲಕನ ಸ್ಥಿತಿ ಗಂಭೀರ

Spread the love

ರಾಯಚೂರು: ಬೀದಿ ನಾಯಿಗಳ ಕಾಟ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಯಚೂರು  ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ಮನೆಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ದಾಳಿ ವೇಳೆ ನಾಯಿಗಳು ಬಾಲಕನ ತಲೆಯ ಭಾಗವನ್ನ ಸಂಪೂರ್ಣವಾಗಿ ಕಚ್ಚಿದೆ. ಈ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಬಾಲಕನನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತ, ಚಿತ್ರದುರ್ಗದಲ್ಲಿ ಬೀದಿ ನಾಯಿಗಳ ದಾಳಿ ಮತ್ತೆ ಆತಂಕ ಮೂಡಿಸಿದೆ. ನಗರದ ಚೇಳಗುಡ್ಡ ಮತ್ತು ನೆಹರು ನಗರ ಬಡಾವಣೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಪುಟ್ಟ ಮಕ್ಕಳು ನಾಯಿಗಳ ದಾಳಿಗೆ ಒಳಗಾಗಿ ಗಾಯಗೊಂಡಿದ್ದಾರೆ. ಮನೆ ಮುಂದೆ ಆಟವಾಡುತ್ತಿದ್ದ ಸುಮಾರು 5-6 ವರ್ಷದ ಮಕ್ಕಳ ಮೇಲೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿವೆ. ದಾಳಿಯಿಂದ ಮಕ್ಕಳ ಮುಖ, ಕೈ, ಕಾಲು ಸೇರಿದಂತೆ ದೇಹದ ಹಲವು ಭಾಗಗಳಿಗೆ ಗಾಯಗಳಾಗಿವೆ. ಗಾಯಗೊಂಡ ಆಲೀನಾ, ಆದಿಲ್, ಮನ್ವಿತ್ ಹಾಗೂ ಮತ್ತೋರ್ವ ಬಾಲಕ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಎಲ್ ನಿನೋ ಎಫೆಕ್ಟ್ – ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ

Spread the loveಬೆಂಗಳೂರು: ಎಲ್‌ನಿನೋ ಎಫೆಕ್ಟ್‌ನಿಂದ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ