Breaking News

ದೀಪಾವಳಿಗೆ `ವೋಕಲ್ ಫಾರ್ ಲೋಕಲ್’ ಅಭಿಯಾನ ಬಲಪಡಿಸಿ: ಪ್ರಧಾನಿ ಮೋದಿ ಕರೆ

Spread the love

ನವದೆಹಲಿ: ದೇಶಾದ್ಯಂತ ದೀಪಾವಳಿ  ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ `ವೋಕಲ್ ಫಾರ್ ಲೋಕಲ್’  ಅಭಿಯಾನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ  ಭಾನುವಾರ ದೇಶದ ಜನರಿಗೆ ಕರೆ ನೀಡಿದ್ದಾರೆ.

ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ `ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳು ಸಾಧಿಸುತ್ತಿರುವ ಯಶಸ್ಸಿನ ಬಗ್ಗೆಯೂ ಪ್ರಸ್ತಾಪಿಸಿದರು. ಬಿಹಾರದ ಮಖಾನಾ ಮತ್ತು ಕರ್ನಾಟಕದ ತೊಗರಿ ಬೇಳೆ ವಿಶ್ವದಾದ್ಯಂತ ಹೊಸ ಮಾರುಕಟ್ಟೆಗಳನ್ನು ಕಂಡುಕೊಳ್ಳುತ್ತಿವೆ. ಮಹಾರಾಷ್ಟ್ರದ ಬುಡಕಟ್ಟು ಉತ್ಪನ್ನಗಳು ಬುಡಕಟ್ಟು ಕಲೆಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಪ್ಯಾಕೇಜಿಂಗ್ ಮೂಲಕ ಮನ್ನಣೆ ಗಳಿಸುತ್ತಿವೆ ಎಂದು ಮೋದಿ ಹೇಳಿದರು.

ಖಾದಿಯ ಜನಪ್ರಿಯತೆ ಹೆಚ್ಚುತ್ತಿದ್ದು, ದೇಶದ ಸಂಪ್ರದಾಯಗಳನ್ನು ಜೀವಂತವಾಗಿರಿಸಿರುವ ಕುಶಲಕರ್ಮಿಗಳಿಗೆ ಇದರಿಂದ ಬೆಂಬಲ ದೊರೆಯುತ್ತಿದೆ. ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಆಯ್ಕೆ ಮಾಡುವ ಮೂಲಕ `ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಮತ್ತಷ್ಟು ಬಲಪಡಿಸೋಣ ಎಂದು ಅವರು ಕರೆ ನೀಡಿದರು.

ಇದೇ ವೇಳೆ ಪಂಜಾಬ್‌ನಲ್ಲಿ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಪುನರುಜ್ಜೀವನದ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು. `ಖೇತಿ ವಿರಾಸತ್ ಮಿಷನ್’ ಎಂಬ ಸಂಸ್ಥೆ ಸಾವಯವ ಕೃಷಿಗೆ ಹೊಸ ಜೀವ ತುಂಬುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಪಂಜಾಬ್‌ನ ಮಾಲ್ವಾ ಪ್ರದೇಶದಲ್ಲಿ ನೈಸರ್ಗಿಕ ಹತ್ತಿ ಕೃಷಿಯನ್ನು ಉತ್ತೇಜಿಸಲು ಈ ತಂಡ ಮುಂದಾಗಿದ್ದು, ಈ ಉಪಕ್ರಮಕ್ಕೆ `ನವ್-ತ್ರಿಂಜನ್’ ಎಂದು ಹೆಸರಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಮೌಢ್ಯ ಬದಿಗೊತ್ತಿ ಚಾಮರಾಜನಗರಕ್ಕೆ ಭೇಟಿ ಕೊಟ್ಟ ಡಿಕೆಶಿ

Spread the loveಚಾಮರಾಜನಗರ: ಈ ಕ್ಷೇತ್ರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಬದಿಗೊತ್ತಿ ಸಿಎಂ ಡಿ.ಕೆ ಶಿವಕುಮಾರ್‌  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ