Breaking News

ಕೊಡಗಿನಲ್ಲಿ ಗಾಳಿ ಮಳೆ ಆರ್ಭಟ ಜೋರು – ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್ ನೀರು ಕಾವೇರಿ ನದಿಗೆ

Spread the love

ಮಡಿಕೇರಿ: ಕೊಡಗಿನಲ್ಲಿ  ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದ ಹಿನ್ನೆಲೆ, 5,365 ಕ್ಯೂಸೆಕ್‌ ನೀರನ್ನ ಕಾವೇರಿ ನದಿಗೆ  ಹರಿಸಲಾಗಿದೆ.

ಬುಧವಾರದಿಂದ ಜಿಲ್ಲೆಯಾದ್ಯಂತ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ, ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ಹಾರಂಗಿ ಜಲಾಶಯಕ್ಕೆ  ಒಳಹರಿವು ಹೆಚ್ಚಿದೆ.

ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ನದಿಯ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ 4,613 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಳಹರಿವು ಹೆಚ್ಚಿದ ಕಾರಣ 5,365 ಕ್ಯೂಸೆಕ್ಸ್ ನೀರನ್ನ ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ