Breaking News

ಹಾಸ್ಟೆಲ್‌ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Spread the love

ಬೆಂಗಳೂರು: ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಸಮೀಪ ನಡೆದಿದೆ.

ಆಂಧ್ರಪ್ರದೇಶದ ಗುಂತಕಲ್ ಮೂಲದ ವರ್ಷಿತಾ (20) ಮೃತ ವಿದ್ಯಾರ್ಥಿನಿ. ಈಕೆ ಗೀತಂ ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿಟೆಕ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ತಂದೆ-ತಾಯಿಗೆ ಕೊನೆಯ ಸಂದೇಶ
ವಿದ್ಯಾರ್ಥಿನಿ ಸಾವಿಗೂ ಮುನ್ನ ತನ್ನ ತಂದೆ ಹಾಗೂ ತಾಯಿಗೆ ಪೋನ್‌ನಲ್ಲಿ ಸಂದೇಶ ಕಳುಹಿಸಿರುವ ಮಾಹಿತಿ ಲಭ್ಯವಾಗಿದೆ. ʻI Love You Dad, I Love You Momʼ ಎಂದು ಪೋಷಕರಿಗೆ ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ.

ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ
ವರ್ಷಿತಾ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಳು. ಅಲ್ಲದೆ, ಕಳೆದ ಎರಡು ದಿನಗಳಿಂದ ಊಟವನ್ನೂ ಮಾಡಿರಲಿಲ್ಲ. ಗುರುವಾರ ರಾತ್ರಿ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ದೂರು
ಇತ್ತ ವಿದ್ಯಾರ್ಥಿನಿಯ ಸಾವಿನ ಬೆನ್ನಲ್ಲೇ ಗೀತಂ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯ ಪೋಷಕರು ಕಾಲೇಜು ಆಡಳಿತ ಮಂಡಳಿ ಮತ್ತು ವಸತಿ ನಿಲಯದ ಸಿಬ್ಬಂದಿಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯ ಸಾವಿನ ಸುತ್ತಲಿನ ಅನುಮಾನಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಹಿರಿಯ ನಾಯಕ ಎಲ್‌.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Spread the loveನವದೆಹಲಿ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಶುಕ್ರವಾರ ತಡರಾತ್ರಿ ಸಮಸ್ಯೆ ಕಾಣಿಸಿಕೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ