Breaking News

ಇಸ್ತ್ರಿ ಮಾಡುವಾಗ ವಿದ್ಯುತ್ ಶಾಕ್‌ನಿಂದ ವಿದ್ಯಾರ್ಥಿ ಸಾವು

Spread the love

ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್‌ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ  ನಗರದ ವಾದಿ-ಏ-ಹುಧಾದಲ್ಲಿ ನಡೆದಿದೆ.

ಉಮರ್ ಫಾರುಕ್ (14) ಮೃತ ದುರ್ದೈವಿ. ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಟ್ಟೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಆತನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆ ಸಾಗಿಸಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.

ಬಾಲಕನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು ಹಾಗೂ, ಸಹಪಾಠಿಗಳು ಸಹ ಬಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ