Breaking News

ಮಹೀಂದ್ರಾ ಥಾರ್ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Spread the love

ರಾಯಚೂರು: ಮಹೀಂದ್ರಾ ಥಾರ್  ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಸಿಂಧನೂರಿನ ಕ್ಯಾಮೆರಾದಲ್ಲಿ ನಡೆದಿದೆ.

ಅರಗಿನಮರ ಕ್ಯಾಂಪ್‌ನ ವಿದ್ಯಾರ್ಥಿನಿ  ಭೂಮಿಕಾ (17) ಮೃತ ದುರ್ದೈವಿ. ಮೇಘನಾ, ಮಹೇಶ್ವರಿ, ಜಹೀದಾ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯರು.

ಕಾಲೇಜು ಮುಗಿದು ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದರು, ಈ ವೇಳೆ ರಿವರ್ಸ್ ತೆಗೆದುಕೊಳ್ಳುವಾಗ ಚಾಲಕನ ಅಜಾಗೂರಕತೆಯಿಂದ ವಾಹನ ವಿದ್ಯಾರ್ಥಿನಿಯರ ಮೇಲೆ ಹರಿದಿದೆ. ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಇನ್ನೂ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸದ್ಯ ಸಿಂಧನೂರು ಸಂಚಾರ ಠಾಣೆ ಪೊಲೀಸರು ವಾಹನ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆ ಚಿಕಿತ್ಸೆ ಮುಂದುವರಿದಿದೆ. ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ