Breaking News

ನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ – ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್

Spread the love

ತುಮಕೂರು: ಲಾರಿಯೊಂದು  ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದರೂ ವಿದ್ಯಾರ್ಥಿನಿ ಬದುಕುಳಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ  ನಡೆದಿದೆ.

ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಮೊದಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ.

ಲಾರಿಯ ಚಕ್ರ ವಿದ್ಯಾರ್ಥಿನಿಯ ಮೇಲೆ ಹರಿಯದೆ, ವಾಹನದ ಮಧ್ಯಭಾಗದಲ್ಲಿ ಸಿಲುಕಿದ್ದ ಕಾರಣ ಆಕೆ ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಸ್ಥಳೀಯರು ತಕ್ಷಣ ಧಾವಿಸಿ ಲಾರಿಯನ್ನು ನಿಲ್ಲಿಸಿ, ವಿದ್ಯಾರ್ಥಿನಿಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಗಾಯಗೊಂಡ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

ಈ ಭೀಕರ ಅಪಘಾತದ ದೃಶ್ಯಗಳು ಸ್ಥಳದಲ್ಲಿದ್ದ ಕೆಲವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿದ್ಯಾರ್ಥಿನಿ ಲಾರಿ ಕೆಳಗೆ ಸಿಲುಕಿದ್ದರೂ ಸಣ್ಣ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವುದು ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ.


Spread the love

About Laxminews 24x7

Check Also

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾ

Spread the loveಲಕ್ನೋ: ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ