ಬೀದರ್: ವಂದೇ ಮಾತರಂ ಹಾಗೂ ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಕ್ಕೆ ಪ್ರಾಂಶುಪಾಲರ ವಿರುದ್ಧ FIR ದಾಖಲಾಗಿದೆ.
ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಆ.15ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಘಟನೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಹಕೀಮ್ ಎಂಬುವವರ ವಿರುದ್ಧ ವಿದ್ಯಾರ್ಥಿಯ ತಂದೆ ಹಿರೋಬಾ ಗೌಳಿ ದೂರು ನೀಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸ್ವಾತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ಬಳಿಕ ಪಿಯುಸಿ ವಿದ್ಯಾರ್ಥಿ ಸಾಗರ್ ಗೌಳಿ ಎಂಬಾತನಿಂದ ವಂದೇ ಮಾತರಂ, ಭಾರತ್ ಮಾತಾಕಿ ಜೈ’ ಘೋಷಣೆ ಕೂಗಿದ್ದ. ಈ ವೇಳೆ ಪ್ರಾಂಶುಪಾಲರು ಒಂದು ಧಾರ್ಮಿಕ ಸಮುದಾಯಕ್ಕೆ ಸೇರಿದ ಘೋಷಣೆ ಆಗಿದ್ದರಿಂದ ಇನ್ನೊಮ್ಮೆ ಕೂಗಬೇಡಿ, ಈ ತರಹ ನಮ್ಮ ಕಾಲೇಜಿನಲ್ಲಿ ನಡೆಯುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.
ಕಾಲೇಜಿನಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಒಟ್ಟೊಟ್ಟಿಗೆ ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರಾಂಶುಪಾಲರು ಹಿಂದೂ-ಮುಸ್ಲಿಂ ಅಂತ ತಾರತಮ್ಯ ಮಾಡುತ್ತಿದ್ದಾರೆ. ಈ ಮೂಲಕ ವಿವಿಧ ಸಮುದಾಯಗಳ ವಿದ್ಯಾರ್ಥಿಗಳಲ್ಲಿ ವೈಮನಸ್ಸು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಖಂಡಿಸಿ ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಪ್ರಾಂಶುಪಾಲರಿಗೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಾರೆ
Laxmi News 24×7