Breaking News

KPSC ಅಕ್ರಮದ ವಿರುದ್ಧ ಅಖಾಡಕ್ಕಿಳಿದ ವಿದ್ಯಾರ್ಥಿಗಳು; ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಪ್ಲ್ಯಾನ್‌

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣದ ವಿರುದ್ಧ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಯುವಕರು ಮುಂದಾಗಿದ್ದಾರೆ.

ಕೆಪಿಎಸ್‌ಸಿ ಅಕ್ರಮದ ಬಗ್ಗೆ ಅಪರಾಧ ತನಿಖಾ ಇಲಾಖೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ವಿದ್ಯಾರ್ಥಿಗಳು ತಾವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿಯಲ್ಲಿ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಹೋರಾಟದ ಮಾದರಿಯಲ್ಲಿಯೇ ಈ ಪ್ರತಿಭಟನೆ ನಡೆಯಲಿದೆ.

ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ ಹೋರಾಟ ಪ್ರಾರಂಭವಾಗಲಿದೆ. ಎಲ್ಲ ವಿದ್ಯಾರ್ಥಿ ಸಂಘಟನೆಗಳು ಈ ಪ್ರತಿಭಟನೆಗೆ ಸಜ್ಜಾಗಿವೆ. ಹೋರಾಟದಲ್ಲಿ ಮರುಪರೀಕ್ಷೆ ನಡೆಸುವುದರ ಕುರಿತು ವಿದ್ಯಾರ್ಥಿಗಳು ಧ್ವನಿ ಎತ್ತಲಿದ್ದಾರೆ.

ಪಶುವೈದ್ಯಾಧಿಕಾರಿಗಳ ಹುದ್ದೆಯಲ್ಲಿ ಗೋಲ್‌ಮಾಲ್ ಆಗಿದ್ದು, ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಿಂದಲೇ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಆದ್ದರಿಂದ ಅಕ್ರಮದ ಖಂಡಿಸಿ ವಿದ್ಯಾರ್ಥಿಗಳೇ ಬೀದಿಗಿಳಿಯಲು ನಿರ್ಧರಿಸಿದ್ದಾರೆ.

ಪರೀಕ್ಷಾರ್ಥಿಗಳು ಈಗಾಗಲೇ ಮರುಪರೀಕ್ಷೆಗಾಗಿ ಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ, ಇದರ ಬೆನ್ನಲ್ಲೆ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆಗೆ ಸಜ್ಜಾಗಿದ್ದಾರೆ.


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ