Breaking News

ನಕಲಿ ದಾಖಲೆ ಸೃಷ್ಟಿ ಸಬ್‌ರಜಿಸ್ಟ್ರಾರ್ ಬಂಧನ

Spread the love

ಚಿಕ್ಕೋಡಿ:ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ, ಮಾರಾಟ ಮಾಡಿಸಿದ ಆರೋಪದಡಿ ಹುಕ್ಕೇರಿ ತಾಲೂಕಿನ  ಉಪನೋಂದಣಿ ಅಧಿಕಾರಿ ಮಡಿವಾಳಯ್ಯ ಬಾನಿಮಠ (34), ಬಾಂಡ್ ರೈಟರ್ ಆನಂದ ದಡ್ಡಿಮನಿ(35) ಪೊಲೀಸರು ಬಂಧಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ  ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ   ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು. ಈ ಅಕ್ರಮಕ್ಕೆ ಉಪನೋಂದಣಿ ಅಧಿಕಾರಿ ಸೇರಿ ಹಲವರು ಭಾಗಿಯಾಗಿರುವ ಕುರಿತು  ಕುರಣಿವಾಡಿ ಗ್ರಾಮದ ಶಿವಾನಂದ ಮಾನಗಾಂವಿ ಎಂಬುವವರು ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇದೇ ಪ್ರಕರಣದ ಅಡಿಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು.ಆದರೆ,ಉಪ ನೋಂದಣಿ ಅಧಿಕಾರಿ, ಬಾಂಡ್ ರೈಟರ್ ಇಬ್ಬರು ಪರಾರಿಯಾಗಿ ಎಂಟಿಸಿಪೇಟರಿ ಬೇಲ್‌ಗೆ ಅರ್ಜಿ ಹಾಕಿದ್ದರು. ಭಾನುವಾರ ಇಬ್ಬರಿಗೆ ನ್ಯಾಯಾಲಯ ಮಂಜೂರು ಮಾಡಿತ್ತು. ಬಳಿಕ ಪೊಲೀಸ್ ಠಾಣೆಗೆ ಇಬ್ಬರು ಹಾಜರಾಗಿ ಜಾಮೀನು ಪಡೆಯುವ ಸಂದರ್ಭದಲ್ಲಿ ಪೊಲೀಸರು ಮತ್ತೊಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿರುವ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಬಳಿಕ ನ್ಯಾಯಾಲಯವು ಇಬ್ಬರನ್ನು ಗೋಕಾಕ ಸಬ್ ಜೈಲಿಗೆ ಕಳುಹಿಸಿ ವಿಚಾರಣೆ ಮುಂದೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Spread the love

About Laxminews 24x7

Check Also

ವದಂತಿಗೆ ಹೆಚ್ಚಿದ ಸಿಲಿಂಡರ್ ಬುಕ್ಕಿಂಗ್

Spread the loveಚಿಕ್ಕೋಡಿ: ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ವದಂತಿ ತೀವ್ರಗೊಂಡಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂಬ ಜಿಲ್ಲಾಡಳಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ