Breaking News

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಶರಣು

Spread the love

ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ.

ಬೇಲೂರು ತಾಲ್ಲೂಕಿನ ಐ. ಹುಣಸೆಕೆರೆ ಗ್ರಾಮದ ಹೆಚ್.ಎಲ್. ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಹೆಚ್. ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ.

ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ ಹಾಗೂ 1.30 ಲಕ್ಷ ರೂ. ಹಣವನ್ನು ಹೆಚ್.ಎಲ್.ಇಂದ್ರ ಪೋಷಕರು ನೀಡಿದ್ದರು. ಪತಿ ಸ್ವಾಮಿ ಬೇಕರಿ ನಡೆಸುತ್ತಿದ್ದ. ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಗ್ರಾಮಕ್ಕೆ ಬಂದು ನೆಲೆಸಿದ್ದ. ಆಗಿನಿಂದ ವರದಕ್ಷಿಣೆ ಹಣ ತರುವಂತೆ ಹೆಂಡತಿಗೆ ಪೀಡಿಸುವುದರ ಜೊತೆಗೆ ಸಂದೇಹ ಪಡುತ್ತಿದ್ದ. ಇನ್ನೂ ಮದುವೆಯಾಗಿ ನಾಲ್ಕು ವರ್ಷಗಳಾದರೂ ದಂಪತಿಗೆ ಮಕ್ಕಳಿರಲಿಲ್ಲ. ಒಂದೆರಡು ಬಾರಿ ರಾಜಿ ಪಂಚಾಯ್ತಿ ಕೂಡ ಮಾಡಿದ್ದರು. ನಿನ್ನೆ (ಜ.31) ದಂಪತಿ ಮಧ್ಯೆ ಜಗಳವಾಗಿತ್ತು. ಅತಿರೇಕಕ್ಕೆ ಹೋಗಿ ಪತ್ನಿ ವಿಷ ಸೇವಿಸಿದ್ದಳು. ಬಳಿಕ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ದುದ್ದ ಪೊಲೀಸ್ ಠಾಣೆಯಲ್ಲಿ ಇಂದ್ರ ಪೋಷಕರು ಪತಿ ಸ್ವಾಮಿ, ಅತ್ತೆ ಶಂಕ್ರಮ್ಮ, ಅತ್ತಿಗೆ ಪುಟ್ಟಿ ವಿರುದ್ಧ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Spread the loveಹಾಸನ: ವಿದ್ಯಾರ್ಥಿಗಳಿಗೆ  ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ  ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ