Breaking News

ಕೋಟಿಗೊಬ್ಬ-3 ಚಿತ್ರ ತಂಡದಿಂದ ಸರ್ಪ್ರೈಸ್…..

Spread the love

ಬೆಂಗಳೂರು: ಲಾಕ್‍ಡೌನ್ ಸಮಯದಲ್ಲೂ ಕೋಟಿಗೊಬ್ಬ-3 ಚಿತ್ರ ತಂಡದಿಂದ ಹೊಸ ಸುದ್ದಿಗಳು ಹೊರ ಬರುತ್ತಿದ್ದು, ಇದೀಗ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಮುಂದಾಗಿದೆ. ಟೀಸರ್ ಮೂಲಕ ಹುಚ್ಚು ಹಿಡಿಸಿದ್ದ ಚಿತ್ರ ತಂಡ ಇದೀಗ ಅಭಿಮಾನಿಗಳ ನಿರೀಕ್ಷೆಯಂತೆ ಹೊಸ ಸುದ್ದಿಯನ್ನು ಕೊಟ್ಟಿದ್ದು, ಸಂತಸ ಮೂಡಿಸಿದೆ.

ಹೌದು ಲಾಕ್‍ಡೌನ್ ಹೊತ್ತಲ್ಲಿ ಕೋಟಿಗೊಬ್ಬ-3 ಚಿತ್ರತಂಡ ಕಿಕ್ಕೇರಿಸುತ್ತಿದ್ದು, ಚಿತ್ರದ ಟೈಟಲ್ ಟ್ರ್ಯಾಕ್‍ನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರದ ಶೂಟಿಂಗ್ ಮುಗಿದು ಹಲವು ದಿನಗಳೇ ಕಳೆದಿದ್ದು, ಚಿತ್ರ ಬಿಡುಗಡೆಯ ಹಂತ ತಲುಪಿದೆ. ಆದರೂ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ತಡವಾಗಿದೆ. ಈ ಹಿಂದೆ ಟೀಸರ್ ಮಾತ್ರ ಬಿಡುಗಡೆಯಾಗಿದ್ದು, ಇದಾದ ಬಳಿಕ ಚಿತ್ರದ ಕುರಿತು ಯಾವುದೇ ಅಪ್‍ಡೇಟ್ ನೀಡಿಲ್ಲ. ಹೀಗಾಗಿ ಅಭಿಮಾನಿಗಳು ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.

ಅಭಿಮಾನಿಗಳು ಪ್ರಶ್ನಿಸುತ್ತಿರುವುದನ್ನು ಮನಗಂಡ ಚಿತ್ರ ತಂಡ ಮೊದಲ ರಿಲಿಕಲ್ ವಿಡಿಯೋ ಬಿಡುಗಡೆಗೆ ಮುಂದಾಗಿದ್ದು ಈ ಕುರಿತು ಸ್ವತಃ ಕಿಚ್ಚ ಸುದೀಪ್ ತಿಳಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಅವರು, ಕೋಟಿಗೊಬ್ಬ-3ಯ ಟೈಟಲ್ ಟ್ರ್ಯಾಕ್‍ನ ಲಿರಿಕಲ್ ವಿಡಿಯೋ ಏಪ್ರಿಲ್ 27ರಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಹ್ಯಾಶ್ ಟ್ಯಾಗ್ ಮೂಲಕ ‘ಆಕಾಶಾನೆ ಅದರಿಸುವ’ ಎಂದು ಬರೆದಿದ್ದಾರೆ. ಅಂದಹಾಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್‍ನಲ್ಲಿ ಹಾಡು ಬಿಡುಗಡೆಯಾಗುತ್ತಿದೆ.

ವಿ.ನಾಂಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ವ್ಯಾಸರಾಜ್ ಕಂಠದಲ್ಲಿ ಈ ಹಾಡು ಮೂಡಿ ಬಂದಿದೆ. ಬಹುನಿರೀಕ್ಷಿತ ಟೈಟಲ್ ಟ್ರ್ಯಾಕ್ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿದೆ.

ಅಂದಹಾಗೆ ಚಿತ್ರದಲ್ಲಿ ಬಹುತಾರಾಗಣವೇ ಇದ್ದು, ವಿಲನ್ ಪಾತ್ರದಲ್ಲಿ ರವಿಶಂಕರ್ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಂ ಹಾಗೂ ತಮಿಳು ನಟಿ ಮಡೋನ್ನಾ ಸೆಬಸ್ಟಿಯನ್ ಈ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಶ್ರದ್ಧಾ ದಾಸ್ ಇಂಟರ್ ಪೋಲ್ ಅಧಿಕಾರಿಯ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಅಫ್ತಾಬ್ ಶಿವದಾಸನಿ, ನವಾಬ್ ಶಹರೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ