Breaking News

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

Spread the love

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಕೈಯಲ್ಲಿ ಕೊಡಗಳನ್ನ ಹಿಡಿದು ಪ್ರತಿಭಟನೆ ಮಾಡಿದ್ದಾರೆ.

ಕಳೆದ 20 ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಜನ, ಜಾನುವಾರುಗಳು ಪರಿತಪಿಸುವಂತಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗ್ರಾಮ ಪಂಚಾಯಿತಿ ಕುಡಿಯುವ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಅಂತ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಹೋರಾಟ ಮಾಡಿದ್ದಾರೆ. ಎಷ್ಟೇ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲಾ ಅಂತ ಕಚೇರಿಗೆ ಬೀಗ ಜಡಿದಿದ್ದಾರೆ.

ಚಿಕ್ಕಕೊಟ್ನೆಕಲ್ ಗ್ರಾಮದಲ್ಲಿನ ಕೊಳವೆ ಬಾವಿಯಲ್ಲಿ ಅಳವಡಿಸಿರುವ ಮೋಟರ್ ಕೆಟ್ಟುಹೋಗಿದ್ದು, ದುರಸ್ಥಿ ಮಾಡಿಸದ ಹಿನ್ನೆಲೆ ಗ್ರಾಮಸ್ಥರಿಗೆ ಕುಡಿಯುವ ನೀರು ಇಲ್ಲದಂತಾಗಿದೆ. ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಜೀವನ ನಡೆಸುವುದಕ್ಕೆ ತೊಂದರೆಯಾಗಿದ್ದು, ನಿತ್ಯ 3 ಕಿ.ಮೀ.ದೂರದಿಂದ ನೀರು ತರಬೇಕಿದೆ ಅಂತ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ