Breaking News

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್

Spread the love

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್  ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸುನೇತ್ರಾ ಪವಾರ್ ಹೆಸರನ್ನು ಅಂತಿಮಗೊಳಿಸಲು ಎನ್​ಸಿಪಿ ನಾಳೆ ಮಧ್ಯಾಹ್ನ 2 ಗಂಟೆಗೆ ಮುಂಬೈನ ವಿಧಾನ ಭವನದಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದೆ. ಇದರ ನಂತರ ಸಂಜೆ ಸುನೇತ್ರಾ ಪವಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿದ್ದಾರೆ.

ಸುನೇತ್ರಾ ಪವಾರ್ ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳ ಸದಸ್ಯರಲ್ಲ. ಆದರೂ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ.

ಹಾಗೇ, ಪ್ರಫುಲ್ ಪಟೇಲ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಮಹಾರಾಷ್ಟ್ರದ ಅತ್ಯಂತ ದೀರ್ಘಾವಧಿಯ ಉಪಮುಖ್ಯಮಂತ್ರಿಯಾಗಿದ್ದರು ಮತ್ತು ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಹಣಕಾಸು, ಯೋಜನೆ ಮತ್ತು ಅಬಕಾರಿ ಇಲಾಖೆಗಳನ್ನು ಅವರು ನಿರ್ವಹಿಸಿದ್ದರು.

ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಜಿತ್ ಪವಾರ್ ಅವರ ವಿಷಯಕ್ಕೆ ಬಂದರೆ, ಅವರು ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನವು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿತ್ತು. ಗುರುವಾರ ಬಾರಾಮತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಇತರರು ಸೇರಿದಂತೆ ಎಲ್ಲಾ ಉನ್ನತ ನಾಯಕರ ಸಮ್ಮುಖದಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ