Breaking News

ಸುಪ್ರೀಂನಿಂದ ಜಾಮೀನು ರದ್ದು – ಮೇಘಾಲಯ ಕೋರ್ಟ್‌ಗೆ ಶರಣಾದ ಹನಿಮೂನ್ ಹಂತಕಿ

Spread the love

ಶಿಲ್ಲಾಂಗ್: ಹನಿಮೂನ್‌ಗೆ ಹೋಗಿದ್ದಾಗ ಪ್ರಿಯಕರನೊಟ್ಟಿಗೆ ಸೇರಿ ಪತಿಯನ್ನು ಹತ್ಯೆಗೈದ ಪ್ರಕರಣದ ಆರೋಪಿ ಸೋನಮ್ ರಘುವಂಶಿ  ಸುಪ್ರೀಂಕೋರ್ಟ್ ಆದೇಶದಂತೆ ಇಂದು (ಜು.30) ಶಿಲ್ಲಾಂಗ್‌ನ ವಿಚಾರಣಾ ನಾಯ್ಯಾಲಯದ ಮುಂದೆ ಶರಣಾಗಿದ್ದಾಳೆ.

ಈ ಕುರಿತು ಈಸ್ಟ್ ಖಾಸಿ ಹಿಲ್ಸ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೈಯಮ್ ಮಾಹಿತಿ ನೀಡಿದ್ದು, ಮಂಗಳವಾರ (ಜು.28) ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಸುಪ್ರೀಂ ಆದೇಶವೇನು?
ವಿಚಾರಣೆಗೆ ಅಡ್ಡಿಯಾಗಬಹುದು ಎಂಬ ಕಾರಣ ನೀಡಿ ಸೋನಮ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಜು.23ರಂದು ರದ್ದುಗೊಳಿಸಿತ್ತು. ಜೊತೆಗೆ ಮೂರು ವಾರಗಳೊಳಗೆ ಶರಣಾಗುವಂತೆ ನಿರ್ದೇಶನ ನೀಡಿತ್ತು. ಒಂದು ವೇಳೆ ಮುಂದಿನ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳ್ಳದಿದ್ದರೆ, ಸೋನಮ್ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಲು ಮುಕ್ತರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಏನಿದು ಪ್ರಕರಣ?
2025ರ ಮೇ 23ರಂದು ಮೇಘಾಲಯದ ಸೋಹ್ರಾ ಪ್ರದೇಶದಲ್ಲಿ ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದರು. ನಂತರ ಜೂನ್ 2ರಂದು ರಾಜಾ ರಘುವಂಶಿ ಅವರ ಮೃತದೇಹವು ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು. ತನ್ನ ಪ್ರಿಯಕರ ರಾಜ್ ಕುಶ್ವಾಹ ಜೊತೆ ಸೇರಿ ಸುಪಾರಿ ಕಿಲ್ಲರ್‌ಗಳನ್ನು ಬಳಸಿ ಹತ್ಯೆ ಮಾಡಿಸಿದ್ದಾರೆ ಎಂಬ ಆರೋಪ ಸೋನಮ್ ಮೇಲಿದೆ. ಕಳೆದ ವರ್ಷ ಜೂನ್‌ನಲ್ಲಿ ಆಕೆಯನ್ನು ಬಂಧಿಸಲಾಗಿತ್ತು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ