Breaking News
Home / ಕೊರೊನಾವೈರಸ್ / ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

Spread the love

ನವದೆಹಲಿ: ಮಹಾಮಾರಿ ಕೊರೊನಾ ವೈರಸ್‌ ನಿಂದಾಗಿ ಖಾಸಗಿ ಸಂಸ್ಥೆಗಳು ತಮ್ಮ ನೌಕರರನ್ನು ಯಾವುದೇ ಕಾರಣ ನೀಡದೆ ಸಾಮೂಹಿಕವಾಗಿ ಕೆಲಸದಿಂದ ವಜಾ ಮಾಡುವ ಆರೋಪ ಕೇಳಿಬಂದಿದೆ. ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಲಾಕ್‌ಡೌನ್‌ನಿಂದಾಗಿ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ಜೀವನಾಧಾರವಾಗಿ ಕನಿಷ್ಠ ವೇತನ ನೀಡಬೇಕು. ತಮ್ಮ ವ್ಯವಹಾರವನ್ನು ನಿಲ್ಲಿಸಿದರೆ, ಕೆಲಸ ಕಳೆದುಕೊಂಡ ನೌಕರರಿಗೆ ಹಣಕಾಸಿನ ನೆರವು ನೀಡಬೇಕೆಂದು ಸರ್ಕಾರ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೊವಿಡ್​-19 ಸಾಂಕ್ರಾಮಿಕ ಬಿಕ್ಕಟ್ಟಿನಿಂದ ಶಾಲಾ ಶುಲ್ಕವನ್ನು ಕೇಳದಂತೆ ಸರ್ಕಾರ, ಸಚಿವಾಲಯಗಳಿಗೆ ನಿರ್ದೇಶನ ನೀಡಬೇಕೆಂದು ಸಹ ಕೇಳಿಕೊಳ್ಳಲಾಗಿದೆ. ಜೀವನೋಪಾಯದ ಹಕ್ಕನ್ನು ಖಚಿತಪಡಿಸಿಕೊಳ್ಳಲು ಈ ಪಿಐಎಲ್ ಸಲ್ಲಿಸಲಾಗಿದೆ


Spread the love

About Laxminews 24x7

Check Also

ಲಂಚದ ಹಣಕ್ಕಾಗಿ ಜೋಡೆತ್ತು ತಂದ ರೈತ!

Spread the love ಬಸವಕಲ್ಯಾಣ: ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿ ಬಿಲ್‌ ಪಾವತಿಗೆ 5 ಸಾವಿರ ರೂ. ಲಂಚ ಕೇಳಿದ್ದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ