Breaking News

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Spread the love

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮನ್ನು ಆರೋಪ‌ ಮುಕ್ತಗೊಳಿಸುವಂತೆ‌ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.

ಇದಕ್ಕೂ ಮುನ್ನ ಆರೋಪ ಮುಕ್ತಗೊಳಿಸುವಂತೆ ಸಲ್ಲಿಸಿದ್ದ ಡಿಶ್ಚಾರ್ಜ್ ಅರ್ಜಿಯನ್ನ 42ನೇ ಎಸಿಜೆಎಂ ಕೋರ್ಟ್ ವಜಾಗೊಳಿಸಿತ್ತು. ಇದನ್ನ ಸೂರಜ್‌ ರೇವಣ್ಣ ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ಇಲ್ಲಿಯೂ ಅರ್ಜಿಯನ್ನ ವಜಾಗೊಳಿಸಿದ್ದು, ಎಸಿಜೆಎಂ ಕೋರ್ಟ್ ಆದೇಶವನ್ನ ಎತ್ತಿಹಿಡಿದಿದೆ.

2024ರ ಜೂನ್‌ನಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಕೇಸ್ ದಾಖಲಾಗಿತ್ತು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ಕೇಸ್ ದಾಖಲಾಗಿತ್ತು.
ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‌ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನ ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.


Spread the love

About Laxminews 24x7

Check Also

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Spread the loveಬೆಂಗಳೂರು: ವಿಧಾನಸೌಧದಲ್ಲಿ  ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ