Breaking News

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

Spread the love

ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ  ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ  ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಹಾಗು ಚಳ್ಳಕೆರೆ ಉಪ ಡಿವೈಎಸ್ಪಿ ಸತ್ಯನಾರಾಯಣ ರಾವ್ ಮಾರ್ಗದರ್ಶನದಲ್ಲಿ, ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ, ನಾಯಕನಹಟ್ಟಿ ಪೊಲೀಸ್ ಪಿಎಸ್‌ಐ ಜಿ ಪಾಂಡುರಂಗಪ್ಪ ನೇತೃತ್ವದೊಂದಿಗೆ ಪೊಲೀಸರ ತಂಡ ದಾಳಿ ನಡೆಸಿದೆ. ಈ ವೇಳೆ ಆರೋಪಿಯು ತನ್ನ ಜಮೀನಿನಲ್ಲಿ ಬೆಳೆದಿದ್ದ ಸುಮಾರು 18 ಲಕ್ಷ ರೂ. ಮೌಲ್ಯದ 791 ಗಾಂಜಾ ಗಿಡಗಳಿಂದ 187 ಕೆಜಿ ಸೊಪ್ಪನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ದಾಳಿಯಲ್ಲಿ ಅಬಕಾರಿ ಅಧೀಕ್ಷಕ ಕಿರಣ್ ಸೇರಿದಂತೆ ಅವರ ಸಿಬ್ಬಂದಿ ಸಹ ಪಾಲ್ಗೊಂಡಿದ್ದರೆಂದು ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ. ಈ ಕಾರ್ಯಾಚರಣೆ ನಡೆಸಿದ ಎಲ್ಲಾ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ