Breaking News

ಗೃಹಿಣಿ ಅನುಮಾನಾಸ್ಪದ ಸಾವು: ಕೊಲೆ ಆರೋಪ

Spread the love

ತುಮಕೂರು: ಗೃಹಿಣಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪತಿ ವಿರುದ್ಧವೇ ಪೋಷಕರು ಕೊಲೆ ಆರೋಪ ಮಾಡಿರುವ ಘಟನೆ ನಡೆದಿದೆ ತುಮಕೂರು  ತಾಲೂಕಿನ ಯಲ್ಲಾಪುರದಲ್ಲಿ ನಡೆದಿದೆ.

ಮೃತ ಗೃಹಿಣಿಯನ್ನು ಮಾಗಡಿ ತಾಲೂಕಿನ ತಾವರೆಕೆರೆ ಹೊನ್ನಗನಹಟ್ಟಿ ಮೂಲದ ಸುಷ್ಮಿತಾ (24) ಎಂದು ಗುರುತಿಸಲಾಗಿದೆ.

ಸುಷ್ಮಿತಾ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿರುವ ಚಿಕ್ಕಪ್ಪನ ಮನೆಗೆ ಹೋಗಿದ್ದರು. ನಿನ್ನೆ ಖುಷಿಯಾಗಿ ಗಂಡನ ಮನೆಯಾದ ಯಲ್ಲಾಪುರಕ್ಕೆ ವಾಪಸ್ ಬಂದಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.

ನಿನ್ನೆ ಸಂಜೆ ಮನೆಯಲ್ಲಿ ಗಲಾಟೆಯಾಗಿದೆ, ಆಸ್ಪತ್ರೆಗೆ ಬನ್ನಿ ಎಂದು ಸುಷ್ಮಿತಾ ಸಂಬಂಧಿಕರಿಗೆ ಪತಿ ಕಡೆಯಿಂದ ಕರೆ ಬಂದಿದೆ. ಸಂಬಂಧಿಕರು ಆಸ್ಪತ್ರೆಗೆ ಬಂದು ನೋಡಿದಾಗ ಸುಷ್ಮಿತಾ ಸಾವನ್ನಪ್ಪಿದ್ದರು.

ಪತಿಯೇ ಕೊಲೆ ಮಾಡಿ ಬಳಿಕ ನೇಣು ಬಿಗಿದಿದ್ದಾನೆ ಎಂದು ಮೃತಳ ತಾಯಿ ಆರೋಪಿಸಿ ದೂರು ನೀಡಿದ್ದಾರೆ. ಪತ್ನಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಹೇಳಿ ಪತಿ ಶ್ರೀನಿವಾಸ್ ಆಸ್ಪತ್ರೆಗೆ ತಂದಿದ್ದ ಎಂದು ತಿಳಿದು ಬಂದಿದೆ.

ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಸುಷ್ಮಿತಾ ಪತಿ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀನಿವಾಸ್ ಅಂತರಸನಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಮಕೂರು ಮಹಿಳಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ