Breaking News

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು: ಪತ್ನಿ ವಶಕ್ಕೆ, ಕೊಲೆ ಶಂಕೆ

Spread the love

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ  ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ  ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಅಭಿನವ್ (38) ಹಾಗೂ ಅವರ ಮಗ ಯದುವೀರ್ (5) ಮೃತ ದುರ್ದೈವಿಗಳು.

ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಘಟನೆ ನಡೆದ ವೇಳೆ ಮೃತರ ಪತ್ನಿ ಪಕ್ಕದ ರೂಮ್‌ನಲ್ಲಿದ್ದಳು ಎನ್ನಲಾಗಿದ್ದು, ಈ ವಿಚಾರ ಪೊಲೀಸರಿಗೆ ಅನುಮಾನ ಮೂಡಿಸಿದೆ. ಹೀಗಾಗಿ ಪೊಲೀಸರು ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣವಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ತಂದೆ-ಮಗನ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ