Breaking News
Home / ಜಿಲ್ಲೆ / ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ

Spread the love

2 ವಾರ ಸವದತ್ತಿ ಯಲ್ಲಮ್ಮ ದರ್ಶನವಿಲ್ಲ
ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನ

ಸವದತ್ತಿ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಣಾಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರದಲ್ಲಿ ಬುಧವಾರದಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸಮಿತಿಯು ತೀರ್ಮಾನ ತೆಗೆದುಕೊಂಡಿದೆ. ಶ್ರೀ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯದಿಂದ ಆಗಮಿಸುವ ಭಕ್ತರು ಕೆಲವು ದಿನಗಳ ಕಾಲ ಕ್ಷೇತ್ರಕ್ಕೆ ಆಗಮಿಸಿದಂತೆ ಸೂಚನೆ ನೀಡಲಾಗಿದೆ.
ಕ್ಷೇತ್ರದ ಯಲ್ಲಮ್ಮಾ ದೇವಿಯ ಹಾಗೂ ಪರಿವಾರದ ದೇವರುಗಳ ದೈನಂದಿನ ಪೂಜಾ ಕೈಂಕರ್ಯಗಳನ್ನು ಅರ್ಚಕರು ಮತ್ತು ಸಿಬ್ಬಂದಿಯವರು ಮಾತ್ರ ಅಗತ್ಯ ಮುಂಜಾಗೃತಾ ಕ್ರಮಗಳನ್ನು ವಹಿಸುವ ಷರತ್ತಿನೊಂದಿಗೆ ಎಂದಿನಂತೆ ಪೂಜೆಗಳನ್ನು ನೆರವೇರಿಸಲು ಆದೇಶಿಸಲಾಗಿದೆ. ಆದರೆ ಯಾವ ಭಕ್ತರಿಗೂ ದರ್ಶನದ ವ್ಯವಸ್ಥೆಯನ್ನು ನೀಡಲಾಗುವದಿಲ್ಲ. ಎರಡು ವಾರ ಅಥವಾ ಮುಂದಿನ ಆದೇಶದವರೆಗೆ ದರ್ಶನವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಭಕ್ತಾಧಿಗಳು ಶ್ರೀಕ್ಷೇತ್ರಕ್ಕೆ ಆಗಮಿಸದಂತೆ ಕಾರ್ಯನಿರ್ವಣಾಧಿಕಾರಿಗಳು ವಿನಂತಿಸಿದ್ದಾರೆ


Spread the love

About Laxminews 24x7

Check Also

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

Spread the loveಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ