Breaking News

ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Spread the love

ನವದೆಹಲಿ: 15ನೇ ಹಣಕಾಸು ಆಯೋಗದ  ಅಡಿಯಲ್ಲಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿಗೂ ಹೆಚ್ಚು ಅನುದಾನವನ್ನ ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಈ ವಿಚಾರವನ್ನ ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್  ಪ್ರಸ್ತಾಪಿಸಿದರು.

ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್‌ ಹುಸೇನ್‌, 15ನೇ ಹಣಕಾಸು ಆಯೋಗದ ಅಡಿಯಲ್ಲಿ ನೀಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ವಿಚಾರ ಪ್ರಸ್ತಾಪಿಸಿ ಮಾತನಾಡಿದರು. 6,000 ಗ್ರಾಮ ಪಂಚಾಯಿತಿಗಳಿಗೆ ಮೀಸಲಾದ 2,133 ಕೋಟಿ ರೂ., ನರೇಗಾ ಯೋಜನೆ  ಅಡಿಯಲ್ಲಿ 1,066 ಕೋಟಿ ರೂ. ಹಾಗೂ ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ 6,976 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಹೇಳಿದರು.

ಕರ್ನಾಟಕದ ಸುಮಾರು 6,000 ಗ್ರಾಮ ಪಂಚಾಯಿತಿಗಳಿಗೆ ಮೀಸಲಾದ 2,133 ಕೋಟಿಗಳಿಗೂ ಹೆಚ್ಚು ಇನ್ನೂ ಬಾಕಿ ಇದೆ. ರಾಜ್ಯವು ಎಲ್ಲಾ ಕಾರ್ಯವಿಧಾನದ ಅವಶ್ಯಕತೆಗಳನ್ನ ಪೂರೈಸಿದ್ದರೂ, ಮೊದಲ ಕಂತಿನ 1,092 ಕೋಟಿಗಳನ್ನು ಸಹ ಬಿಡುಗಡೆ ಮಾಡಿಲ್ಲ. ಹಣವನ್ನ ನಿರಂತರವಾಗಿ ತಡೆಹಿಡಿಯುವುದು ನ್ಯಾಯಸಮ್ಮತವಲ್ಲ ಮತ್ತು ಗ್ರಾಮೀಣ ಆಡಳಿತಕ್ಕೆ ಹಾನಿಕಾರಕವಾಗಿದೆ.

ಹಣ ಬಿಡುಗಡೆಯಾಗದ ಹಿನ್ನೆಲೆ ಪಂಚಾಯಿತಿಗಳು ನೈರ್ಮಲ್ಯ ಕಾರ್ಮಿಕರು ಮತ್ತು ಸ್ಥಳೀಯ ಆಡಳಿತ ಸಿಬ್ಬಂದಿ ಸೇರಿದಂತೆ ಅಗತ್ಯ ಸಿಬ್ಬಂದಿ ವೇತನ ಪಾವತಿಸಲು ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರಿನ ವ್ಯವಸ್ಥೆಗಳು, ಒಳಚರಂಡಿ, ನೈರ್ಮಲ್ಯ ಮತ್ತು ಬೀದಿ ದೀಪಗಳ ನಿಯಮಿತ ನಿರ್ವಹಣೆಗೆ ಅಡ್ಡಿಯಾಗಿದೆ. ಹಲವಾರು ಪಂಚಾಯಿತಿಗಳು ತಮ್ಮ ಖಾತೆಗಳಲ್ಲಿ ಮೂಲಭೂತ ವೆಚ್ಚಗಳನ್ನು ಸಹ ಪೂರೈಸಲು ಯಾವುದೇ ಕಾರ್ಯಾಚರಣೆಯ ಹಣ ಹೊಂದಿಲ್ಲ ಎಂದು ಗಮನಸೆಳೆದರು.

MNREGA ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ 1,066 ಕೋಟಿ ಬರಬೇಕಿದೆ, ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ 6,976 ಕೋಟಿ ಬಾಕಿ ಇದೆ. ಈ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ರು.


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ