Breaking News
Home / new delhi / ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ,”ಮಾಹಿತಿ ನೀಡಿದವರ ಹೆಸರ ಗೌಪ್”ಯ

ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ,”ಮಾಹಿತಿ ನೀಡಿದವರ ಹೆಸರ ಗೌಪ್”ಯ

Spread the love

ಲಕ್ನೋ: ತಬ್ಲಿಘಿ ಜಮಾತ್‍ಗೆ ತೆರಳಿ ಇನ್ನೂ ಪತ್ತೆಯಾಗದವರನ್ನು ಹುಡುಕಿಕೊಟ್ಟವರಿಗೆ ಬಹುಮಾನ ನೀಡಲಾಗುವುದು ಎಂದು ಉತ್ತರ ಪ್ರದೇಶದ ಪೊಲೀಸರು ಪ್ರಕಟಿಸಿದ್ದಾರೆ.

ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ ಸದಸ್ಯರು ಕೂಡಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ನಡೆಸಬೇಕೆಂದು ಎಲ್ಲ ಸರ್ಕಾರಗಳು ಸೂಚನೆ ನೀಡುತ್ತಿವೆ. ಆದರೂ ಈ ಕಾರ್ಯಕ್ರಮಕ್ಕೆ ತೆರಳಿದ ಹಲವು ಮಂದಿ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಜಂಗಢದ ಪೊಲೀಸರು ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆ ಮಾಡಿದವರಿಗೆ ಬಹುಮಾನ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಬಹಳ ಸಂಖ್ಯೆಯಲ್ಲಿ ಜಮಾತ್ ಸದಸ್ಯರು ತಲೆ ಮರೆಸಿಕೊಂಡಿದ್ದಾರೆ. ಹೀಗಾಗಿ ಈಗಲೂ ನಾವು ಸಂಬಂಧಪಟ್ಟವರ ಮುಂದೆ ಹಾಜರಾಗಿ ಎಂದು ಮನವಿ ಮಾಡುತ್ತಿದ್ದೇವೆ. ಒಂದು ವೇಳೆ ಬೇರೆ ವ್ಯಕ್ತಿಗಳಿಂದ ಇವರ ಬಗ್ಗೆ ಮಾಹಿತಿ ಸಿಕ್ಕಿದ್ದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಜಂಗಢದ ಎಸ್‍ಪಿ ತ್ರಿವೇಣಿ ಸಿಂಗ್ ಹೇಳಿದ್ದಾರೆ.

ತಬ್ಲಿಘಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 5 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಅಷ್ಟೇ ಅಲ್ಲದೆ ಮಾಹಿತಿ ತಿಳಿಸಿದ ವ್ಯಕ್ತಿಗಳ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ. ಅಜಂಗಢದಲ್ಲಿ 4 ಪಾಸಿಟಿವ್ ಪ್ರಕರಣ ಬಂದಿದ್ದು ಎಲ್ಲ ತಬ್ಲಿಘಿ ಕಾರ್ಯಕ್ರಮಕ್ಕೆ ತೆರಳಿದವರೇ ಆಗಿದ್ದಾರೆ.

ಶನಿವಾರದವರೆಗೆ ಒಟ್ಟು ಉತ್ತರ ಪ್ರದೇಶದಲ್ಲಿ 448 ಮಂದಿಗೆ ಕೊರೊನಾ ಬಂದಿದೆ. ಈ ಪೈಕಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ 254 ಮಂದಿಗೆ ಪಾಸಿಟಿವ್ ಬಂದಿದೆ


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ