ರಾಮನಗರ: ನ್ಯಾಯಾಲಯದ ಎಚ್ಚರಿಕೆ ನಡುವೆಯೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ರಾತ್ರಿ ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾದರು. ಕೆಲವು ದಿನಗಳ ಹಿಂದಷ್ಟೇ ಕುಮಾರಸ್ವಾಮಿ ಬೆಂಗಳೂರಿನ ನ್ಯಾಯಾಲಯವೊಂದರಲ್ಲಿ ಪ್ರಕರಣವೊಂದರ ವಿಚಾರಣೆಗೆ ಗೈರಾಗಿದ್ದರು. ಎಚ್.ಡಿ. ದೇವೇಗೌಡರಿಗೆ ಕೋವಿಡ್ ಸೋಂಕು ತಗುಲಿದ ಕಾರಣ ಕುಮಾರಸ್ವಾಮಿ ಕ್ವಾರಂಟೈನ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಬಂದಿಲ್ಲ ಎಂದು ಎಚ್ ಡಿಕೆ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಇದಕ್ಕೆ ನ್ಯಾಯಾಧೀಶರು ಸಿಟ್ಟಾಗಿದ್ದು, …
Read More »ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.
ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ …
Read More »ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು
ಬೆಂಗಳೂರು,ಫೆ.24- ಹಫ್ತಾ ವಸೂಲಿ, ಸುಲಿಗೆ, ಬೆದರಿಕೆ ಸೇರಿದಂತೆ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ರವಿ ಪೂಜಾರಿಯನ್ನು ಸ್ವದೇಶಕ್ಕೆ ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಮುಂಜಾನೆ ಸೆನೆಗಲ್‍ನಿಂದ ಬೆಂಗಳೂರಿಗೆ ರವಿ ಪೂಜಾರಿಯನ್ನು ಕರೆತರಲಾಗಿದ್ದು, ಮಡಿವಾಳದಲ್ಲಿರುವ ಇಂಟರಾಗೇಷನ್ ಕಚೇರಿಯಲ್ಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗಿದೆ. ಎಡಿಜಿಪಿ ಅಮರ್‍ಕುಮಾರ್ ಪಾಂಡೆ ನೇತೃತ್ವದ ತಂಡ ರವಿ ಪೂಜಾರಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಕರ್ನಾಟಕದಲ್ಲಿ ರವಿಪೂಜಾರಿ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜಕಾರಣಿಗಳಿಗೆ …
Read More »ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ: ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ತಾಲೂಕಿನ ಕಾರ್ಗಲ್‍ನ ಶಮಿ ಅಲಿಯಾಸ್ ಮೊಹಮ್ಮದ್ ಬಂಧಿತ ಆರೋಪಿ. ಈತ 2001 ರಲ್ಲಿ ಕುಂಸಿಯ 19 ವರ್ಷದ ಯುವತಿಯನ್ನು ಅಪಹರಿಸಿ ಕೆಲ ದಿನಗಳ ಕಾಲ ಯಾರಿಗೂ ತಿಳಿಯದಂತೆ ಅಜ್ಞಾತ ಸ್ಥಳದಲ್ಲಿ ಇರಿಸಿದ್ದ. ನಂತರ ಪ್ರಕರಣ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಆರೋಪಿಯು …
Read More »