Breaking News
Home / Tag Archives: bangalore

Tag Archives: bangalore

ಬಿಟ್ ಕಾಯಿನ್ ಕೇಸ್ ವಿಚಾರಣೆ ವೇಳೆ ಪೊಲೀಸರಿಗೆ ಸಿಕ್ತು ಸ್ಪೋಟಕ ಮಾಹಿತಿ

ಬೆಂಗಳೂರು : ಬಿಟ್ ಕಾಯಿನ್ ಕೇಸ್ ನ ಆರೋಪಿ ಶ್ರೀಕಿ ಜೊತೆ ಕಿರಿಕ್ ಮಾಡಿಕೊಂಡು ಬಂಧನಕ್ಕೊಳಗಾಗಿದ್ದ ಭೀಮಾ ಜ್ಯುವೆಲ್ಲರ್ಸ್ ನ ಮಾಲೀಕರ ಮಗ ವಿಷ್ಣುಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಇದೀಗ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದೆ.   ಎನ್ ಡಿ ಪಿ ಎಸ್ ಕಾಯಿದೆ ಅಡಿ ಬಂಧನಕ್ಕೊಳಗಾದ ವಿಷ್ಣುಭಟ್ ವಿದೇಶಿ ಪ್ರಜೆ ಜೊತೆ ಪೆಡ್ಲಿಂಗ್ ನಡೆಸುತ್ತಿದ್ದನು ಎನ್ನಲಾಗಿದೆ. ಆದ್ದರಿಂದ ಆತನ ಮನೆ ಮೇಲೆ ದಾಳಿ ನಡೆಸಿದಾಗ ಗಾಂಜಾ ಹಾಗೂ …

Read More »

ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ

ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು …

Read More »

ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ

ಉಡುಪಿ: ಜಿಲ್ಲೆಯ ಮಲ್ಪೆ ಕಡಲತೀರದಲ್ಲಿ ಬೆಂಗಳೂರು ಮೂಲದ ಮೂವರು ನೀರಿನಲ್ಲಿ ಮುಳುಗಿದ್ದು, ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ 10 ಜನ ಪ್ರವಾಸಿಗರು ಮಲ್ಪೆಯ ಕಡಲತೀರಕ್ಕೆ ಆಗಮಿಸಿದ್ದರು.ಈ ಪೈಕಿ ಐದಾರು ಜನ ನೀರಿಗಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಮೊದಲು ಯುವತಿಯೊಬ್ಬರು ನೀರಿನಲ್ಲಿ ಮುಳುಗಿದ್ದರು. ಆಕೆಯ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಹಾರಿದ್ದಾರೆ. ಈ ವೇಳೆ ಮೂವರು ಕೂಡ ಅಪಾಯಕ್ಕೆ ಸಿಲುಕಿದ್ದರು. ದಡದಲ್ಲಿ ಇದ್ದ ವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ ಸಮುದ್ರ …

Read More »

ಅವಧಿ ಮುಗಿದರೂ ಜಾಗ ಖಾಲಿ ಮಾಡದೇ ಜಾಂಡಾ ಹೂಡಿ ಕುಳಿತ ಅಧಿಕಾರಿಗಳು

ಬೆಂಗಳೂರು, ಸೆ.2- ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಅವಧಿ ಮುಗಿದಿದ್ದರೂ ಮಾತೃ ಹುದ್ದೆಗೆ ತೆರಳದೆ ಇನ್ನೂ ಅದೇ ಹುದ್ದೆಗಳಲ್ಲಿ ಮುಂದುವರಿದಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿ ವಿವಿಧ ಇಲಾಖೆಗಳಲ್ಲಿ ಅವಧಿ ಮುಗಿದಿದ್ದರೂ ಐದಾರು ವರ್ಷಗಳಿಂದ ಅದೇ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲವರಂತೂ ರಾಜಕೀಯ ಪ್ರಭಾವ ಬಳಸಿ ಅದೇ ಹುದ್ದೆಯಲ್ಲಿ ಬಲವಾಗಿ ಬೇರೂರಿರುವ ನಿದರ್ಶನಗಳು ಕೂಡ ಇವೆ. 2013ರ ಸೆಕ್ಷನ್-6ರನ್ವಯ ನಿಯೋಜನೆ ಮೇರೆಗೆ …

Read More »

ಈರುಳ್ಳಿ ಬೆಲೆ ಗಗನಕ್ಕೇಏರಿಕೆಯಾಗುವ ಲಕ್ಷಣಗಳು………….!

ಬೆಂಗಳೂರು, ಆ.24- ಈರುಳ್ಳಿ ಬೆಲೆ ಮತ್ತೆ ದುಪ್ಪಾಟ್ಟಾಗುವ ಸಾಧ್ಯತೆ ಇದೆ. ಸದ್ಯ ಕೆಜಿಗೆ 10ರಿಂದ 15 ರೂ.ಗೆ ಸಿಗುತ್ತಿದ್ದ ಈರುಳ್ಳಿ ಇದೀಗ 30ರಿಂದ 50ರೂ.ಗೆ ಏರಿಕೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ. ಗ್ರಾಹಕರ ಕಣ್ಣಲ್ಲಿ ನೀರು ತರಿಸುವ ಜತೆಗೆ ಈರುಳ್ಳಿ ಬೆಳೆದ ಕೃಷಿಕನ ಬಾಳಲ್ಲೂ ಕಣ್ಣೀರಿಗೆ ಕಾರಣವಾಗುತ್ತಿದೆ. ಅತಿ ಹೆಚ್ಚು ಈರುಳ್ಳಿ ಬೆಳೆಯುವ ಗದಗ, ಬಾಗಲಕೋಟೆ, ಧಾರವಾಡ, ಬೆಳಗಾವಿಯಲ್ಲಿ ಪ್ರವಾಹ ಬಂದು ಈರುಳ್ಳಿ ಬೆಳೆ ನಾಶವಾಗಿದೆ. ಮಳೆ ಹಾಗೂ ರೋಗ ಬಾಧೆಯಿಂದ …

Read More »

ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು …

Read More »

ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ……

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವ್ಯಾಪಕವಾಗಿ ಬೇರೂರಿದೆ. ಅದರಲ್ಲೂ ಅನ್‍ಲಾಕ್ ಬಳಿಕ ಸೋಂಕು ದಿನದಿನಕ್ಕೆ ಹೆಚ್ಚಳವಾಗುತ್ತಿದೆ. ಅನ್‍ಲಾಕ್ ಮಾಡಿದ ಸರ್ಕಾರ ಸೋಂಕಿಗೆ ಕಡಿವಾಣ ಹಾಕುವಲ್ಲಿ ವಿಫಲವಾಯ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾದಿಂದ ರಕ್ಷಣೆ ಮಾಡಿಕೊಳ್ಳಲು ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರಿನಲ್ಲಿ 3 ದಿನ ಸೆಲ್ಫ್ ಲಾಕ್‍ಡೌನ್ ಮೈಸೂರು ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಲಾಕ್‍ಡೌನ್‍ಗೆ ಜಿಲ್ಲಾಡಳಿತ ತೀರ್ಮಾನಿಸಿದೆ. ಇಂದು ಮೊದಲ ಆಷಾಡ …

Read More »

ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಕೊರೊನಾ ವಾರಿಯರ್ಸ್ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಸೋಂಕು ಹೆಚ್ಚಾಗುತ್ತಿದ್ದಂತೆ ಎಚ್ಚೆತ್ತ ಆಯುಕ್ತ ಭಾಸ್ಕರ್ ರಾವ್ ಅವರು ಠಾಣೆಗಳಿಗೆ ಹತ್ತು ಸೂಚನೆ ರವಾನಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್‍ಗೆ ಇಲಾಖೆ ಮತ್ತಷ್ಟು ಸಿಬ್ಬಂದಿ ಒಳಗಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಏನು ಸೂಚನೆ?: 1. ಏನೇ ಸಮಸ್ಯೆ ಬಂದರೂ ಧೈರ್ಯವಾಗಿ ಎದುರಿಸಬೇಕು. ಗಾಬರಿಯಾಗಬೇಡಿ, …

Read More »

ಅಮಾವಾಸ್ಯೆ ದಿನ ಭೀಕರ ಅಪಘಾತದಲ್ಲಿ ಮೂವರು ಸಾವು- ವ್ಹೀಲಿಂಗ್ ವೇಳೆ ಡಿಕ್ಕಿ ಶಂಕೆ….

ಬೆಂಗಳೂರು: ಅಮಾವಾಸ್ಯೆ ದಿನ ಭೀಕರ ಸಂಭವಿಸಿ ಮೂವರು ಯುವಕರು ಧಾರುಣ ಸಾವು ಕಂಡ ಘಟನೆ ಯಲಹಂಕದ ಜೆಕೆವಿಕೆ ಬಳಿ ಇಂದು ಬೆಳಗ್ಗೆ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ಮಹಮ್ಮದ್ ಆದಿ ಆಯಾನ್ (16), ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಮೃತ ದುರ್ದೈವಿಗಳು. ವ್ಹೀಲಿಂಗ್ ಮಾಡುವ ವೇಳೆ ಬೈಕ್ ಮುಖಾ ಮುಖಿ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ವೇಳೆ ವೇಗವಾಗಿದ್ದ …

Read More »

ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಇಲ್ಲ- ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದು ಸತ್ಯಕ್ಕೆ ದೂರವಾಗಿದೆ. ಈಗಾಗಲೇ ವಿದ್ಯಾರ್ಥಿನಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ …

Read More »