Breaking News

Tag Archives: belagavi

ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.

ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ …

Read More »

ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …

Read More »

ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾ ದಿಂದಾಗಿ ಸರ್ಕಾರ ಘೋಷಿಸಿದ ಲಾಕ್ ಡೌನ ಸಮಯದಲ್ಲಿ ಸಂಕಷ್ಟಕ್ಕೊಳಗಾದ ವಡಗಾವಿಯ 40 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದರು.  ಇಲ್ಲಿನ ಅಲಾರವಾಡ ಸೇತುವೆಯ ಕೆಳಗಡೆ ಬುಧವಾರ  ಹಿರಿಯ ಕನ್ನಡ ಹೋರಾಟಗಾರ ಮಲ್ಲಪ್ಪ ಅಕ್ಷರದ, ಗಜಾನನ ಗುಂಜೇರಿ, ರಾಜೂ ಟೋಪಗಿ, ಮ್ಯಾಗೋಟಿ ಆಯೋಜಿಸಿದ್ದರು. ಜನರಿಗೆ ನೆರವಾಗುವ ದೃಷ್ಟಿಯಿಂದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ 23 ರಂದು,ದಾನಿಗಳ ನೆರವಿನಿಂದ, ಆರಂಭಿಸಿದ ” ಹಸಿದವರತ್ತ ನಮ್ಮ ಚಿತ್ತ” …

Read More »

ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ: ಪಿ.ವಿ.ಮೋಹನ್

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ. ಜಿಲ್ಲಾಡಳಿತ ಇದನ್ನು ಮುಚ್ಚಿಡುತ್ತಿದೆ. ಸರಿಯಾಗಿ ಟೆಸ್ಟ್ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಬರುವವರನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ಕ್ವಾರಂಟೈನ್ ಮಾಡುತ್ತಿಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತಿದೆ. ಸರಿಯಾಗಿ ಚೆಕ್ ಮಾಡಿದರೆ ಶೇ.10ರಿಂದ 15ರಷ್ಟು ಜನರಿಗೆ ಸೋಂಕು …

Read More »