ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. ಸಂಪುಟ ವಿಸ್ತರಣೆ …
Read More »ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್
ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ನಾನು ಅಸ್ಸಾಂನ ಬಿಜೆಪಿ ಸಿಎಂ ಅಭ್ಯರ್ಥಿಯಲ್ಲ: ರಂಜನ್ ಗೊಗೊಯ್
ನವದೆಹಲಿ: ನಾನು ಅಸ್ಸಾಂನ ಬಿಜೆಪಿ ಪಕ್ಷದ ಸಿಎಂ ಅಭ್ಯರ್ಥಿಯಲ್ಲ ಎಂದು ಸುಪ್ರೀಂ ಕೋರ್ಟ್‍ನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಂದಿನ ವರ್ಷ ಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗುವ ಅವಕಾಶವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಿಎಂ ತರುಣ್ ಗೊಗೊಯಿ ಶನಿವಾರ ಬೆಳಗ್ಗೆ ಹೇಳಿದ್ದರು. ಈ ವಿಚಾರವಾಗಿ ಇಂದು ಮಾತನಾಡಿರುವ …
Read More »ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ
ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …
Read More »ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.
ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ. ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ. 100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು …
Read More »ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ಮಹಾ ಮಳೆಗೆ ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಸಂಭವಿಸಿದ್ದು, ಇದೀಗ ಹವಾಮಾನ ಇಲಾಖೆ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂಬ ಆಘಾತಕಾರಿ ಮಾಹಿತಿ ನೀಡಿದೆಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆಗಸ್ಟ್ 9 ರಿಂದ 13ರವರೆಗೆ ವರುಣ ಅಬ್ಬರಿಸಲಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, …
Read More »ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್…………….
ಚಾಮರಾಜನಗರ: ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗರಾಜಪ್ಪ ಅವರಿಗೆ ಸೇರಿದ ಜಮೀನಿನಲ್ಲಿದ್ದ ಪಾಳು ಬಾವಿಗೆ ಕಳೆದ ಐದು ದಿನಗಳ ಹಿಂದೆ ಚಿರತೆಯೊಂದು ಬಿದ್ದಿತ್ತು. ವಿಷಯ ತಿಳಿದ ಬಂಡೀಪುರ ಅರಣ್ಯಾಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬಾವಿಯ ಪೊಟರೆಯೊಂದಕ್ಕೆ ಚಿರತೆ ಸೇರಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಹೊರಬರಲಿಲ್ಲ. ಅಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಗೆ …
Read More »ಜಿಂದಾಲ್ ಕಾರ್ಖಾನೆ ಲಾಕ್‍ಡೌನ್ ಮಾಡೋಕೆ ಆಗಲ್ಲ: ಜಿಲ್ಲಾಧಿಕಾರಿ ನಕುಲ್……
ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯನ್ನು ಸಂಪೂರ್ಣ ಲಾಕ್‍ಡೌನ್ ಮಾಡಲು ಆಗಲ್ಲವೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಜುಬಿಲೆಂಟ್ ಕಾರ್ಖಾನೆ ಸಣ್ಣ ಪ್ರಮಾಣದ ಉತ್ಪಾದನೆ ಹೊಂದಿದೆ. ಅಲ್ಲದೇ ಅದು ಕೇವಲ 1 ಸಾವಿರ ನೌಕರರನ್ನ ಮಾತ್ರ ಹೊಂದಿದೆ. ಹೀಗಾಗಿ, ಕಾರ್ಖಾನೆಯನ್ನು ಲಾಕ್‍ಡೌನ್ ಮಾಡಿ ಕೊರೊನಾ ಸೋಂಕಿತರ ಸಂಖ್ಯೆಯನ್ನು ಸೊನ್ನೆಗೆ ತರಲಾಯಿತು. ಆದರೆ, ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಸುಮಾರು …
Read More »ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು……….
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ …
Read More »ರೋಗ ನಿರೋಧ ಶಕ್ತಿ ಹೆಚ್ಚಿಸುವಂತಹ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ………
ತುಮಕೂರು: ಇಡೀ ದೇಶವೇ ಮಹಾಮಾರಿ ಕೊರೊನಾ ವೈರಸ್‍ನಿಂದ ತತ್ತರಗೊಂಡಿದೆ. ಇದುವರೆಗೂ ಕೊರೊನಾ ವೈರಸ್‍ಗೆ ಸೂಕ್ತವಾದ ಔಷಧಿ ಸಿಗಲಿಲ್ಲ. ಸದ್ಯಕ್ಕೆ ತುಮಕೂರು ಜಿಲ್ಲೆಯ ರೈಸ್ ಮಿಲ್ ಒಂದರಲ್ಲಿ ವಿಶೇಷವಾದಂತಹ ಅಕ್ಕಿಯೊಂದು ತಯಾರಾಗುತ್ತಿದೆ. ಈ ಅಕ್ಕಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತಿದೆ. ಆಯುರ್ವೇದಿಕ್ ರೈಸ್ ಎಂದು ಇದರ ಹೆಸರು. ನೈಸರ್ಗಿಕವಾದಂತಹ ವಸ್ತುಗಳನ್ನು ಈ ಅಕ್ಕಿಯಲ್ಲಿ ಬೆರೆಸಿ ತಯಾರು ಮಾಡಲಾಗುತ್ತದೆ. ಈ ರೈಸ್ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಲಿದೆ ಎನ್ನಲಾಗಿದೆ. …
Read More »