Home / Tag Archives: carona

Tag Archives: carona

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು……….

ಕೊಪ್ಪಳ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವೇಳೆ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದ್ದು, ಇದೀಗ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆತಂಕ ಎದರಾಗಿದೆ. ಜಿಲ್ಲೆಯ ಕಾರಟಗಿ ನಗರದ ಖಾಸಗಿ ಶಾಲಾ ಪರೀಕ್ಷಾ ಕೇಂದ್ರದಲ್ಲಿನ ವಿದ್ಯಾರ್ಥಿನಿಗೆ ಸೋಂಕು ದೃಢವಾಗಿದೆ. ಕಳೆದ ಎರಡು ವಿಷಯಗಳ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿನಿಗೆ ಇಂದು ಸೋಂಕು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿಯೇ ವಿದ್ಯಾರ್ಥಿನಿಗೆ ಕೊರೊನಾ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ರಾಯಚೂರು …

Read More »

ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ

ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …

Read More »

ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು

ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …

Read More »

ನಾಲ್ವರಿಂದ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ………….

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರೋದು ಧೃಡವಾಗಿದೆ. ಪರಿಣಾಮ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ಈಗಾಗಲೇ ಕಾಫಿನಾಡಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆರು ತಿಂಗಳಿಂದ ಜೈಲಿನಲ್ಲಿದ್ದ ಕೈದಿಗೂ ಕೊರೊನಾ ತಗುಲಿದ್ದು, ಆತನಿಗೆ ಸೋಂಕು ಹೇಗೆ ಬಂತು ಎಂದು ಹುಡುಕಾಡುವಷ್ಟರಲ್ಲಿಯೇ ಜಿಲ್ಲೆಯ ನಾಲ್ವರು ಪೊಲೀಸರಿಗೆ ಕೋವಿಡ್-19 ತಗುಲಿದೆ. ಇದೀಗ ಜಿಲ್ಲಾಡಳಿತತ ಜೊತೆಗೆ ಇತರೆ ಪೊಲೀಸರಿಗೆ ಕೊರೊನಾ ಢವ ಢವ ಶುರುವಾಗಿದೆ. …

Read More »

ಯಡಿಯೂರಿನಲ್ಲಿ ಸಿಎಂ ಕುಟುಂಬದವರಿಂದ ವಿಶೇಷ ಪೂಜೆ …………

ಕುಣಿಗಲ್,ಜೂ.21-ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಮನೆದೇವರಾದ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಜಾನೆಯಿಂದಲೇ ವಿಶೇಷ ಪೂಜೆಯಲ್ಲಿ ತೊಡಗಿದರು. ನಿನ್ನೆಯೇ ಯಡಿಯೂರಿಗೆ ಭೇಟಿ ನೀಡಿ ದೇವಸ್ಥಾನದಲ್ಲಿ ತಂಗಿದ್ದ ಕುಟುಂಬ ಸದಸ್ಯರು ಹಲವು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೃಶ್ಚಿಕ ರಾಶಿಗೆ ಅಶುಭ ಫಲವೆಂದು ಶಾಂತಿಗಾಗಿ ಜೋತಿಷ್ಯರ ಸಲಹೆಯಂತೆ ಸಿಎಂ ಕಿರಿಯ ಪುತ್ರ ವಿಜಯೇಂದ್ರ ದಂಪತಿ ಹೋಮ ಹನವನದಂತಹ ವಿಶೇಷ ಪೂಜೆಗಳನ್ನು ನಡೆಸಿದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಂಗಳೂರಿನಲ್ಲೇ ಇದ್ದು, …

Read More »

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆ………..

ಬೆಂಗಳೂರು, ಜೂ.19- ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ …

Read More »

ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ …

Read More »

ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ

ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …

Read More »

ಕೊರೊನಾ ರಣಕೇಕೆ ಮಧ್ಯೆ ಭರ್ಜರಿ ನೈಟ್ ಪಾರ್ಟಿ- ಕೆಆರ್‍ಎಸ್ ಡ್ಯಾಂ ಬಳಿ ಮಜಾ……

ಮಂಡ್ಯ: ಒಂದೆಡೆ ದೇಶದಲ್ಲಿ ಕೊರೊನಾ ರಣತಾಂಡವವಾಡ್ತಿದೆ. ಹೀಗಿರುವಾಗ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಆದರೆ ಇದನ್ನ ಉಲ್ಲಂಘಿಸಿ ಕೆಆರ್‍ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ ನಡೆದಿದೆ. ಕೆಆರ್‍ಎಸ್ ಸಮೀಪದ ತೋಟದಲ್ಲಿ ಆರ್ಕೆಸ್ಟ್ರಾ ಧ್ವನಿವರ್ಧಕ ಬಳಸಿ, ಪೆಂಡಾಲ್ ಹಾಕಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದೆ. ಪೊಲೀಸ್ ಠಾಣೆ ಸಮೀಪ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿದ್ದರು. ಅಲ್ಲದೆ ತಡರಾತ್ರಿಯಲ್ಲಿ ಇದನ್ನ ಕೇಳಲು …

Read More »

ತಮಿಳುನಾಡಿನಲ್ಲಿ ಡಿಎಂಕೆ ಶಾಸಕನನ್ನೇ ಬಲಿ ಪಡೆದ ಕಿಲ್ಲರ್ ಕೊರೊನಾ.!

ಚೆನ್ನೈ, ಜೂ.10- ಡೆಡ್ಲಿ ಕೊರೊನಾ ಸೋಂಕಿಗೆ ಡಿಎಂಕೆ ಮುಖಂಡ ಮತ್ತು ಶಾಸಕ ಜೆ. ಅನ್ಬಳಗನ್(62) ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟರು. ಮಧುಮೇಹ, ಅಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಸಮಸ್ಯೆಗಳಿಂದ ಬಳಸುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ತಗುಲಿದ …

Read More »