ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಜ್ಯೋತಿ ಮಲ್ಲಪ್ಪ ಮಾಳಿ ಎನ್ನುವ ಪ್ರಯೋಗಶೀಲ ರೈತರೊಬ್ಬರು ಮಸಾರಿ ಭೂಮಿಯಲ್ಲಿ ಪೇರಲ ಮತ್ತು ಮಾವು ಜೊತೆ ಮಿಶ್ರ ಬೆಳೆಯಾಗಿ ಹೂವು ಹಾಗೂ ತರಕಾರಿ ಬೆಳೆದು ಆದಾಯ ಕಾಣುತ್ತಿದ್ದಾರೆ. ಸಾಂಪ್ರದಾಯಿಕವಾಗಿ ಕಬ್ಬು ಬೆಳೆಯುತ್ತಿದ್ದ ಅವರು, ಅದರಿಂದ ಹೆಚ್ಚಿನ ಆದಾಯ ಸಿಗದಿದ್ದರಿಂದ ಪರ್ಯಾಯವಾಗಿ ಪೇರಲ ಮತ್ತು ಮಾವು ಬೆಳೆದಿದ್ದಾರೆ. 2 ವರ್ಷಗಳ ಹಿಂದೆ 300 ಪೇರಲ ಮತ್ತು 400 ಮಾವಿನ ಸಸಿಗಳನ್ನು ನೆಟ್ಟಿದ್ದಾರೆ. ನಾಟಿ ಮಾಡಿದ 9ನೇ ತಿಂಗಳಿನಲ್ಲಿಯೇ …
Read More »ವಿದ್ಯುತ್ ಅವಘಡ: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು
ಚಿಕ್ಕೋಡಿ: ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …
Read More »ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ.: ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ಬಿಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಈ ಸುದ್ದಿಗೆ ಸ್ಪಷ್ಟನೆ ನೀಡುವ ಮೂಲಕ ಬೆಳಗಾವಿ ಸಾಹುಕಾರ ತೆರೆ ಎಳೆದಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನನ್ನ ಬಗ್ಗೆ ಪಕ್ಷ ಬಿಡುತ್ತೇನೆ ಎಂದು ಊಹಾಪೋಹಗಳನ್ನ ಎಬ್ಬಿಸಲಾಗಿದೆ ಎಂದು ಗರಂ ಆದರು. ನನ್ನ ರಾಜಕೀಯ ಜೀವನ …
Read More »