Breaking News

Tag Archives: corona

ಮಗಳ ಮದುವೆಗೆಂದು ಬಂದಿದ್ದ ತಂದೆ ಕೊರೊನಾಗೆ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ.

ರಾಯಚೂರು/ಯಾದಗಿರಿ: ಮಗಳ ಮದುವೆಗೆಂದು ಬಂದಿದ್ದ ತಂದೆ ಕೊರೊನಾಗೆ ವೈರಸ್ ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವನಕೇರಿ ಮೂಲದ ವ್ಯಕ್ತಿ(45) ರಾಯಚೂರಿನ ಸಿರವಾರ ಪಟ್ಟಣದ ವಿದ್ಯಾನಗರದಲ್ಲಿ ನಡೆದಿದ್ದ ಮದುವೆಗೆ ಆಗಮಿಸಿದ್ದರು. ಮಗಳ ಮದುವೆ ಮುಗಿಸಿದ್ದ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಕೂಡಲೇ ಅವರನ್ನು ಸಿರವಾರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ರಾಯಚೂರು ರಿಮ್ಸ್ ಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹಾಗೆಯೇ ರಿಮ್ಸ್ ಗೆ ಕರೆದುಕೊಂಡು ಹೋಗುತ್ತಿರುವಾಗಲೇ …

Read More »

ಮಳೆಗೆ ಇನ್ನೂ ಸಿದ್ಧವಾಗದ ನಗರಸಭೆ, ಗ್ರಾಮ ಪಂಚಾಯ್ತಿಗಳು…………

ಯಾದಗಿರಿ: ಜಿಲ್ಲೆಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಮಳೆ ಬಂದಿದ್ದು, ಹಳ್ಳಿ ಮತ್ತು ನಗರಗಳಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದ್ದು, ಚರಂಡಿಗಳು ತುಂಬಿ ಹರಿದಿವೆ.   ಪರಿಣಾಮ ರಸ್ತೆ ತುಂಬೆಲ್ಲಾ ಕೊಳಚೆನೀರು ನಿಂತು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಯಾದಗಿರಿ ನಗರದ ಗಾಂಧಿ ವೃತ್ತ, ನಗರ ಪೋಲಿಸ್ ಠಾಣೆಯ ಮುಂದೆ ನೀರು ನಿಂತು ಕೆರೆಯಂತಾಗಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿದ್ದರೂ …

Read More »

: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೋವಿಡ್ 19 ಪಾಸಿಟಿವ್……….

ನವದೆಹಲಿ: ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಇಂದು ಕೋವಿಡ್ 19 ಪಾಸಿಟಿವ್ ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ 55 ವರ್ಷದ ಸಚಿವರನ್ನು ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್‍ಜಿಎಸ್‍ಎಸ್‍ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರ ವರದಿಯಲ್ಲಿ ಕೊರೊನಾ ನೆಗೆಟಿವ್ ಅಂತ ಬಂದಿತ್ತು. ಆದರೆ ಸಚಿವರಿಗೆ ಜ್ವರ ಕಡಿಯಾಗದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಆಗಿ 24 …

Read More »

ವೆಂಟಿಲೇಟರ್ ಕೊರತೆ, ಬೆಂಗಳೂರಿನ ಜನತೆಗೆ ಹೆಚ್ಚಿದ ಆತಂಕ..!

ಬೆಂಗಳೂರು, ಜೂ.17- ಬೆಂಗಳೂರು ಮಹಾನಗರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಸಾವಿನ ಸಂಖ್ಯೆಏರಿಕೆಯಾಗಿ, ಸೋಂಕಿತರ ಸಂಖ್ಯೆ ಕೂಡ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ತುರ್ತು ನಿಗಾಘಟಕಗಳ ಕೊರತೆ ಎದುರಾಗಿರುವುದರಿಂದ ಆತಂಕದ ಕಾರ್ಮೋಡ ಕವಿದಿದೆ. ಕೊರೊನಾಗೆ ಮತ್ತೆ ಮೂರು ಮಂದಿ ಬಲಿಯಾಗಿದ್ದಾರೆ. ಮಂಗಮ್ಮನಪಾಳ್ಯದ 65 ವರ್ಷದ ವ್ಯಕ್ತಿ ಮತ್ತು ಬೆಂಗಳೂರಿನಲ್ಲಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಕಳೆದ 12ರಂದು ದಾಖಲಿಸಲಾಗಿತ್ತು. ನಿನ್ನೆ ರಾತ್ರಿ …

Read More »

ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ …

Read More »

ವಿಶ್ವದಾದ್ಯಂತ ಕ್ರೂರಿ ಕೊರೋನಾಗೆ 4.47 ಲಕ್ಷ ಬಲಿ, 82.65 ಲಕ್ಷ ಮಂದಿಯಲ್ಲಿ ಸೋಂಕು…………..

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.17- ಜಗವೇ ಒಗ್ಗೂಡಿದ್ದರೂ ಜಗ್ಗದಜಗಮೊಂಡ ಕೋಡ್-19 ವೈರಸ್ ಹಾವಳಿ ಮುಂದುವರಿದಿದೆ.  ನಾಶಕಾರಿ ಮಹಾಮಾರಿ ದಾಳಿಯಿಂದ ವಿಶ್ವಕಂಗಾಲಾಗಿದ್ದು, ಸಾವಿನ ಸಂಖ್ಯೆ 4.47ಲಕ್ಷಹಾಗೂ ಸೋಂಕಿತರ ಸಂಖ್ಯೆ82.65 ಲಕ್ಷಮೀರಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 43.21 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಡೆಡ್ಲಿಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿಮತ್ತೆಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. 10ಕ್ಕೂ ಹೆಚ್ಚು ದೇಶಗಳು ಪೀಡೆಯಿಂದ ಮುಕ್ತವಾಗಿರುವುದು …

Read More »

ಬೆಂಗ್ಳೂರಿನಲ್ಲಿ ಪೊಲೀಸರಿಗೆ ಕೊರೊನಾ ಕಂಟಕ- ನಗರದ 7 ಠಾಣೆಯ ಪೇದೆಗಳಿಗೆ ಸೋಂಕು……….

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾನೆ ಇದೆ. ಇದರ ಬೆನ್ನಲ್ಲೇ ಜನರನ್ನು ರಕ್ಷಣೆ ಮಾಡಬೇಕಾದ ಆರಕ್ಷಕರಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ನಗರದಲ್ಲಿ ಇಲ್ಲಿವರೆಗೂ ಏಳು ಪೊಲೀಸ್ ಠಾಣೆಯ ಪೊಲೀಸ್ ಪೇದೆಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಮತ್ತಷ್ಟು ಆತಂಕಕ್ಕೆ ದೂಡಿದೆ. ನಗರದ ಬಂಡೇಪಾಳ್ಯ ಪೊಲೀಸ್ ಠಾಣೆ, ಜೆಜೆ ನಗರ ಪೊಲೀಸ್ ಠಾಣೆ, ಜೆಬಿ ನಗರ ಪೊಲೀಸ್ ಠಾಣೆ, ಡಿಜಿ …

Read More »

ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ರೇವು ಪಾರ್ಟಿ- ಕಣ್ಮುಚ್ಚಿ ಕುಳಿತ ಪೊಲೀಸರು

ಮಂಡ್ಯ: ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ಬೆಂಗಳೂರಿನ ಕೆಲ ಶ್ರೀಮಂತ ವ್ಯಕ್ತಿಗಲು ರೇವ್ ಪಾರ್ಟಿ ನಡೆಸಿದ್ದಾರೆ. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದ್ದು, ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ತಡರಾತ್ರಿಯಲ್ಲಿ ಕೇಳಲು ಹೋದ ಸಾರ್ವಜನಿಕರಿಗೆ ಆವಾಜ್ ಹಾಕಿದ್ದಾರೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳು ರಾತ್ರಿ ಕಾರಿನಲ್ಲಿ ಆಗಮಿಸಿದ್ದರು. ಅವರಿಗಾಗಿ ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಮತ್ತು ಪೆಂಡಾಲ್ ಹಾಕಿ ಎಣ್ಣೆ ಪಾರ್ಟಿ ಆಯೋಜಿಸಲಾಗಿತ್ತು. ಠಾಣೆ …

Read More »

ಮೇ.17ರ ವರೆಗೂ ಲಾಕ್‌ಡೌನ್‌ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …

Read More »

ಕ್ವಾರಂಟೈನ್‍ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….

ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …

Read More »