ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು …
Read More »ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ: ಪ್ರಶಾಂತ್ ಸಂಬರಗಿ
ಬೆಂಗಳೂರು: ಕನ್ನಡ ಚಿತ್ರರಂಗ ದಿನ ದಿನಕ್ಕೆ ಒಂದೊಂದೇ ಹೆಸರುಗಳನ್ನು ಕೇಳಿ ಬೆಚ್ಚುತ್ತಿದೆ. ಈಗಾಗಲೇ ಖಾಕಿ ಪಡೆ ಸ್ಯಾಂಡಲ್‍ವುಡ್ ಕೆಲವು ನಟ-ನಟಿಯರನ್ನು ಡ್ರಗ್ಸ್ ಜಾಲದ ವಿಷಯದಲ್ಲಿ ಕರೆದು ವಿಚಾರಣೆ ನಡೆಸಿದ್ದು, ಈಗಲೂ ನಡೆಸುತ್ತಿದೆ. ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ ಎಂದು ಗುಡುಗಿದ್ದಾರೆ. ಹೌದು. ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಡ್ರಗ್ಸ್ ಸುಂಟರಗಾಳಿ ಇನ್ನೂ …
Read More »ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ
ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್‍ಎಸ್‍ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …
Read More »ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು …
Read More »ಛೋಟಾ ಮುಂಬೈ ಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ.
ಹುಬ್ಬಳ್ಳಿ: ಛೋಟಾ ಮುಂಬೈ ಎಂದು ಹೆಸರುವಾಸಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುವವರ ಮೇಲೆ ಪೊಲೀಸರ ದಾಳಿ ಮುಂದುವರಿದಿದೆ. ಸೋಮವಾರ ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಿ, 14 ಸಾವಿರಕ್ಕೂ ಹೆಚ್ಚಿನ ಮೊತ್ತದ ಒಂದು ಕೆಜಿಗೂ ಹೆಚ್ಚಿನ ಗಾಂಜಾ ವಶಕ್ಕೆ ಪಡೆದಿದ್ದಾರೆ. ಕೇಶ್ವಾಪುರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೇ ಪ್ಲೈ ಓವರ್ ಬ್ರಿಡ್ಜ್ ಬಳಿ ಮೂವರನ್ನು ಬಂಧಿಸಿ, 6 ಸಾವಿರ ಮೌಲ್ಯದ 600 …
Read More »