ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ. ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ. ಸದ್ಯ ಬಳ್ಳಾರಿ ನಾಲಾ, …
Read More »ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್
ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …
Read More »ಈ ಬಾರಿಯ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 8,071 ಕೋಟಿ ರೂ.ಗಳಷ್ಟು ನಷ್ಟ:B.S.Y.
ಬೆಂಗಳೂರು: ಪ್ರವಾಹದಿಂದಾಗಿ ಈ ಬಾರಿ ಸಹ ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, 8,071 ಕೋಟಿ ರೂ.ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೇಂದ್ರ ಅಧ್ಯಯನ ತಂಡಕ್ಕೆ ಮಾಹಿತಿ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹದ ಹಾನಿಯ ಸಮೀಕ್ಷೆಗೆ ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ನೇತೃತ್ವದ ತಂಡ ಆಗಮಿಸಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ತಂಡ ಭೇಟಿ ಮಾಡಿ ವಿವರ ಪಡೆಯಿತು. ಈ ವೇಳೆ ರಾಜ್ಯದಲ್ಲಿ ಹಾನಿಯಾಗಿರುವ ಕುರಿತು ಸಿಎಂ ವಿವರಿಸಿದರು. ಈ …
Read More »ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ
ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …
Read More »ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ
ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಗುರುವಾರ ಮಳೆ ಅಲ್ಪ ಕಡಿಮೆ ಇದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ನೀರು ಬಂದು ಗುರುವಾರ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ …
Read More »ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಚಿಕ್ಕೋಡಿ ಭಾಗದ ನದಿಗಳ ಒಳ ಹರಿವು ಹೆಚ್ಚಳ………
ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ರಾಜ್ಯದ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಚಿಕ್ಕೋಡಿ, ನಿಪ್ಪಾಣಿ ಭಾಗದ ನದಿಗಳ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳ ಕಂಡಿದ್ದು, ದೂಧ್ ಗಂಗಾ, ವೇದ ಗಂಗಾ, ಕೃಷ್ಣಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಜನರಿಗೆ ಈ ವರ್ಷವೂ ಪ್ರವಾಹದ ಭೀತಿ ಎದುರಾಗಿದೆ. ನಿಪ್ಪಾಣಿ ತಾಲೂಕಿನ ದೂಧ್ ಗಂಗಾ ನದಿಯ ಒಳಹರಿವಿನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು, …
Read More »