ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …
Read More »2023ರ ಸಿ. ಎಂ. ನಾನೇ: H.D.K.
2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್ಅನ್ನು ಅಧಿಕಾರಕ್ಕೆ …
Read More »ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ, ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿಲ್ಲ. ಆದರೆ ಈ ಬಾರಿ ಬೆಳಗಾವಿಯಲ್ಲಿಯೇ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು ಈ ಭಾಗದ ಜನರ ಒತ್ತಾಯದ ಮೇರೆಗೆ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ತೀರ್ಮಾನ ಕೈಗೊಂಡಿದೆ. ಆದರೆ ಇನ್ನು ಕೂಡ ದಿನಾಂಕ ನಿಗದಿ ಆಗಿಲ್ಲ. ಈ ಮಧ್ಯ ಸೋಮವಾರ ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸುವರ್ಣಸೌಧಕ್ಕೆ ಭೇಟಿ ನೀಡಲಿದ್ದಾರೆ. ಅಗತ್ಯ …
Read More »ಆರ್ ಎಸ್ ಎಸ್, ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ:ಸಿದ್ದರಾಮಯ್ಯ
ಬಾದಾಮಿ: ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ ವರ್ತಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟು ಟೀಕೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕ ಸಿ ಟಿ ರವಿಯವರ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ ಇಲ್ಲವೋ …
Read More »ಇಂದು Union Budgetನಲ್ಲಿ ಕರ್ನಾಟಕಕ್ಕೆ ಏನೇನು ಸಿಗಬಹುದು?
ನವದೆಹಲಿ: ಬಿಜೆಪಿ ನಾಯಕರು “ಎರಡೂ ಕಡೆ ಒಂದೇ ಸರ್ಕಾರ ಇದ್ದರೆ ‘ಡಬಲ್ ಇಂಜಿನ್ (Double Engine) ಇದ್ದಂತೆ’, ಭಾರೀ ಅಭಿವೃದ್ಧಿ ಕೆಲಸ ಮಾಡಬಹುದು” ಎಂದು ಹೇಳುತ್ತಿರುತ್ತಾರೆ. ಅವರು ಹೇಳುವಂತೆ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿವೆ. ಆದರೆ ಬಿಜೆಪಿ (BJP) ಮುಖಂಡರು ಹೇಳುವಂತೆ ಅನುಕೂಲಗಳಾಗುತ್ತಿಲ್ಲ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ (Goods and Service Tax) ಪಾಲು ಸರಿಯಾಗಿ ಬಂದಿಲ್ಲ. ರಾಜ್ಯದ ಯೋಜನೆಗಳಿಗೆ ಸರಿಯಾಗಿ ಅನುದಾನ …
Read More »ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `GPS’ ಆಧರಿಸಿ ಹಣ ಬಿಡುಗಡೆ
ಚಿತ್ರದುರ್ಗ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಿಪಿಎಸ್ ಆಧರಿಸಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ದೂರು ಬರುತ್ತಿವೆ. ಸಕಾಲಕ್ಕೆ ಹಣ ಬಿಡುಗಡೆಯಾಗದ ಕಾರಣ ಮೂರು ತಿಂಗಳ ವಿಜಿಲ್ ಆಪ್ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ಇನ್ನು ವಿಜಲ್ ಆಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು …
Read More »ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ
ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಗುರುವಾರ ಮಳೆ ಅಲ್ಪ ಕಡಿಮೆ ಇದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ನೀರು ಬಂದು ಗುರುವಾರ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ …
Read More »ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸಕಲ ಸಿದ್ಧತೆ …………..
ಬೆಂಗಳೂರು, ಜೂ.18- ಕೊರೊನಾ ಸೋಂಕಿನ ಆತಂಕದ ನಡುವೆ ನಾಳೆ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಪಿಯು ಮಂಡಳಿ ಸಜ್ಜಾಗಿದೆ. ಮಾರ್ಚ್‍ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೋವಿಡ್-19 ನಿಂದಾಗಿ ಮುಂದೂಡಲ್ಪಟ್ಟಿತ್ತು. ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್‍ಕಡ್ಡಾಯವಾಗಿದ್ದು , ಪರೀಕ್ಷಾ …
Read More »ವಿಧಾನಪರಿಷತ್ ಚುನಾವಣೆ ,ನಾಮಪತ್ರ ಸಲ್ಲಿಕೆ ಭರಾಟೆ ,,,,,,,,,,,,
ಬೆಂಗಳೂರು, ಜೂ.- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಗಳಿಗೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ವಿರೋಧ ಪಕ್ಷಗಳಾದ ಕಾಂಗ್ರೆಸ್‍ನ ಇಬ್ಬರು, ಜೆಡಿಎಸ್‍ನ ಒಬ್ಬ ಹಾಗೂ ಆಡಳಿತಾರೂಢ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂರು ಪಕ್ಷಗಳಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇದುವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ. ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ …
Read More »ಮೇ.17ರ ವರೆಗೂ ಲಾಕ್‌ಡೌನ್ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …
Read More »