ಚಿಕ್ಕೋಡಿ(ಬೆಳಗಾವಿ): ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ಬಿಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಈ ಸುದ್ದಿಗೆ ಸ್ಪಷ್ಟನೆ ನೀಡುವ ಮೂಲಕ ಬೆಳಗಾವಿ ಸಾಹುಕಾರ ತೆರೆ ಎಳೆದಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನನ್ನ ಬಗ್ಗೆ ಪಕ್ಷ ಬಿಡುತ್ತೇನೆ ಎಂದು ಊಹಾಪೋಹಗಳನ್ನ ಎಬ್ಬಿಸಲಾಗಿದೆ ಎಂದು ಗರಂ ಆದರು. ನನ್ನ ರಾಜಕೀಯ ಜೀವನ …
Read More »ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ
ಬೆಂಗಳೂರು: ಲಾಕ್‍ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಲಾಕ್‍ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಸಭೆಯ ಮುಖ್ಯಾಂಶಗಳು 1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ …
Read More »15 ದಿನದಲ್ಲಿ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಕಳುಹಿಸಿಕೊಡಿ : ಸುಪ್ರೀಂ ಆದೇಶ
ನವದೆಹಲಿ,ಜೂ.9- ದೇಶಾದ್ಯಂತ ಲಾಕ್‍ಡೌನ್ ಜಾರಿಯಾದ ಪರಿಣಾಮ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ 15 ದಿನದಲ್ಲಿ ಕಳುಹಿಸಿಕೊಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ವಲಸೆ ಕಾರ್ಮಿಕರಿಗೆ ಉದ್ಯೋಗ ಯೋಜನೆ ಹಾಗೂ ನಿರಾಶ್ರಿತರ ತಾಣಗಳನ್ನು ಸ್ಥಾಪಿಸಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್‍ಕೃಷ್ಣ ಕೌಲ್ ಮತ್ತು ಎಂ.ಆರ್.ಷಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚನೆ …
Read More »ಕಾಂಗ್ರೆಸ್‍ಗೆ ಭವಿಷ್ಯ ಇಲ್ಲವೆಂದು ಈಗಾಗಲೇ ಮನೆಗೆ ಕಳಿಸಿದ್ದಾರೆ: ಸಿದ್ದರಾಮಯ್ಯಗೆ ಶೆಟ್ಟರ್ ತಿರುಗೇಟು
ಧಾರವಾಡ: ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ ಎಂದು ಇಗಾಗಲೇ ಮನೆಗೆ ಕಳಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಪಕ್ಷದಿಂದ ರಾಜ್ಯದ ಜನರಿಗೆ ಭವಿಷ್ಯ ಇಲ್ಲ ಎಂದು ಧಾರವಾಡದಲ್ಲಿ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್, ಕಾಂಗ್ರೆಸ್‍ಗೆ ರಾಜ್ಯದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಭವಿಷ್ಯ ಇಲ್ಲ. ರಾಹುಲ್ ಗಾಂಧಿ ಅವರಂಥ …
Read More »ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ
ರಾಮನಗರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಮೂಡಿದೆ ಎಂಬ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ಬತ್ಥನಾರಾಯಣ (Dr CN Ashwathnarayan) ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಸರ್ಕಾರ ಉರುಳುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಮೊದಲು ಬಿಡಲಿ. 2023ರವರೆಗೆ ಮಾತ್ರವಲ್ಲ, 2023ರ ನಂತರವೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಮನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ …
Read More »