ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು …
Read More »ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.
ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ …
Read More »ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ
ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …
Read More »ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು
ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …
Read More »ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …
Read More »ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ
ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …
Read More »ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ
ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಆ ಗ್ರಾಮಸ್ಥರಿಗೆ ಸರ್ಕಾರನೇ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅಲ್ಲದೇ ಸರ್ಕಾರದ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಆದರೆ ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ ಬಂದಿದೆ. ಕಳೆದ 40 ವರ್ಷಗಳಿಂದ ನೆಮ್ಮದಿಯಿಂದ ಇದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮಸ್ಥರ ಜನರ ಪರಿಸ್ಥಿತಿ ಈಗ ಸರ್ಕಾರದ ಒಂದು …
Read More »ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ
ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …
Read More »ವಿದ್ಯಾರ್ಥಿಗಳು ಕಂಟೈನ್ಮೆಂಟ್ ಝೋನ್‍ಗೆ ಹೋಗಬಹುದು, ಪರೀಕ್ಷೆ ನಡೆಸಬೇಡಿ: ಎನ್‍ಎಸ್‍ಯುಐ ಆಗ್ರಹ
ನವದೆಹಲಿ: ಸಿಬಿಎಸ್‍ಇ ಮತ್ತು ಯುಜಿಸಿ ನಡೆಸುತ್ತಿರುವ ಎಲ್ಲ ಪರೀಕ್ಷೆಗಳನ್ನು ಮುಂದೂಡವಂತೆ ಆಗ್ರಹಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿವಾಸದೆದರು ಎನ್‍ಎಸ್‍ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎನ್‍ಎಸ್‍ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ ಕರಿಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಯಿತು. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸಿಬಿಎಸ್‍ಇ ಬೋರ್ಡ್ 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ ಜೊತೆಗೆ ಜೆಇಇ ಮುಖ್ಯ ಪರೀಕ್ಷೆ, …
Read More »ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್…………….
ಚಾಮರಾಜನಗರ: ಬಾವಿಗೆ ಬಿದ್ದಿದ್ದ ಚಿರತೆ ಸಿನಿಮೀಯ ರೀತಿಯಲ್ಲಿ ಎಸ್ಕೇಪ್ ಆಗಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗರಾಜಪ್ಪ ಅವರಿಗೆ ಸೇರಿದ ಜಮೀನಿನಲ್ಲಿದ್ದ ಪಾಳು ಬಾವಿಗೆ ಕಳೆದ ಐದು ದಿನಗಳ ಹಿಂದೆ ಚಿರತೆಯೊಂದು ಬಿದ್ದಿತ್ತು. ವಿಷಯ ತಿಳಿದ ಬಂಡೀಪುರ ಅರಣ್ಯಾಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬಾವಿಯ ಪೊಟರೆಯೊಂದಕ್ಕೆ ಚಿರತೆ ಸೇರಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಷ್ಟೇ ಪ್ರಯತ್ನಪಟ್ಟರೂ ಹೊರಬರಲಿಲ್ಲ. ಅಲ್ಲದೆ ಅರಣ್ಯ ಇಲಾಖೆ ಸಿಬ್ಬಂದಿಗೆ …
Read More »