ಶ್ರೀನಗರ, ಜೂ.17- ಇಂಡೋ-ಚೀನಾ ಗಡಿಯಲ್ಲಿ ಉಭಯ ಸೇನಾ ಪಡೆಗಳ ನಡುವೆ ಬಿಕ್ಕಟ್ಟು ಉಲ್ಬಣಗೊಂಡಿರುವಾಗಲೇ ಅತ್ತ ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲೂ ಪಾಕಿಸ್ತಾನ ಸೇನಾಪಡೆಗಳ ಪುಂಡಾಟ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ನೌಗಂ ಬಳಿ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಉದ್ದಕ್ಕೂ ಪಾಕಿಸ್ತಾನ ಸೇನಾ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನಾ ಪಡೆಗಳನ್ನು ಗುರಿಯಾಗಿಟ್ಟುಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ನಿನ್ನೆ ರಾತ್ರಿ ಪಾಕಿಸ್ತಾನ ಸೈನಿಕರು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ …
Read More »ಕೊರೊನಾ ವೈರಸ್ – ರೋಗಿಯ ಜೀವ ಉಳಿಸಬಲ್ಲ ಮೊದಲ ಔಷಧಿ ಲಭ್ಯ…..
ಲಂಡನ್: ಸದ್ಯಕ್ಕೆ ಕೊರೊನಾ ವೈರಸ್‌ಗೆ ಔಷಧಿ ಲಭ್ಯವಿಲ್ಲ. ವಿಶ್ವದ ವಿವಿಧ ದೇಶಗಳಲ್ಲಿ ಔಷಧಿ ಕಂಡು ಹಿಡಿಯುವ ಕಾರ್ಯ ನಡೆಯುತ್ತಿದೆ. ಆದರೆ ಇಂಗ್ಲೆಂಡ್ ಸಂಶೋಧಕರು ಒಂದು ಡ್ರಗ್ಸ್ ನೀಡುವ ಮೂಲಕ ಕೋವಿಡ್ 19 ಗುಣಪಡಿಸಬಹುದು ಎಂದು ಹೇಳಿದ್ದಾರೆ. ಹೌದು. ವಿಶ್ವದೆಲ್ಲೆಡೆ ಕಡಿಮೆ ಬೆಲೆಗೆ ಸಿಗುವ ʼಡೆಕ್ಸಮೆಥಾಸೊನ್ʼ(Dexamethasone) ನೀಡಿದ್ರೆ ಕೋವಿಡ್ 19 ನಿಂದ ಬಳಲುತ್ತಿರುವ ರೋಗಿ ಗುಣವಾಗುವ ಸಾಧ್ಯತೆ ಹೆಚ್ಚು ಎಂದು ಸಂಶೋಧಕರು ತಿಳಿಸಿದ್ದಾರೆ. ಡೆಕ್ಸಮೆಥಾಸೊನ್ ನೀಡಿದ್ದರಿಂದ ಇಂಗ್ಲೆಂಡ್‌ನಲ್ಲಿ ಸಾವಿನ ದವಡೆಯಲ್ಲಿದ್ದ ಸುಮಾರು …
Read More »ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ…….
ಹೈದರಾಬಾದ್: ನನಗೆ ಒಬ್ಬನೇ ಮಗ ಎಂದು ಹುತಾತ್ಮ ಯೋಧ ಕರ್ನಲ್ ಸಂತೋಷ್ ಬಾಬು ಅವರ ತಾಯಿ ಕಣ್ಣೀರಿಟ್ಟಿದ್ದಾರೆ. ಭಾರತ-ಚೀನಾ ಮಧ್ಯೆ ಯುದ್ಧದ ಕಾರ್ಮೋಡ ಆವರಿಸುತ್ತಿದೆ. ಪದೇ ಪದೇ ಕಿರಿಕ್ ಮಾಡುವ ಚೀನಾ, ಯುದ್ಧೋನ್ಮಾದದಲ್ಲೇ ತೇಲಾಡುತ್ತಿದೆ. ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಭಾರತೀಯ ಸೇನೆ ಕರ್ನಲ್ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದರು. ಇಂದು ರಾತ್ರಿ ಬಂದ ಮಾಹಿತಿ ಪ್ರಕಾರ ಒಟ್ಟು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ …
Read More »ನನ್ನ ರಾಜಕೀಯ ಜೀವನ ಇರುವವರೆಗೆ ನಾನು ಬಿಜೆಪಿ ಪಕ್ಷದಲ್ಲಿ ಇರುತ್ತೇನೆ.: ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷ ಬಿಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದು, ಈ ಸುದ್ದಿಗೆ ಸ್ಪಷ್ಟನೆ ನೀಡುವ ಮೂಲಕ ಬೆಳಗಾವಿ ಸಾಹುಕಾರ ತೆರೆ ಎಳೆದಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಘ ಪರಿವಾರದಲ್ಲಿ ನನಗೆ ಸಿಗುತ್ತಿರುವ ಆಶೀರ್ವಾದವನ್ನ ಕೆಲ ವೈರಿ ಕುತಂತ್ರಿಗಳಿಗೆ ನೋಡಲು ಆಗುತ್ತಿಲ್ಲ. ಹೀಗಾಗಿ ನನ್ನ ಬಗ್ಗೆ ಪಕ್ಷ ಬಿಡುತ್ತೇನೆ ಎಂದು ಊಹಾಪೋಹಗಳನ್ನ ಎಬ್ಬಿಸಲಾಗಿದೆ ಎಂದು ಗರಂ ಆದರು. ನನ್ನ ರಾಜಕೀಯ ಜೀವನ …
Read More »ಅಧಿಕಾರಿಗಳ ಎಡವಟ್ಟು- 10 ಹಳ್ಳಿಗಳಿಗೆ ಜೀವನಾಡಿಯಾಗಿದ್ದ ದಡ್ಡಿ ಗ್ರಾಮ ಸೀಲ್‍ಡೌನ್………
ಬೆಳಗಾವಿ: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ದಡ್ಡಿ ಹತ್ತು ಹಳ್ಳಿ ಜನರ ಜೀವನಾಡಿಯಾಗಿತ್ತು. ಪ್ರತಿಯೊಂದು ವಸ್ತು ಖರೀದಿಗೂ ಜನರು ಈ ಗ್ರಾಮಕ್ಕೆ ಬರಬೇಕಿತ್ತು. ಆದರೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಇದೀಗ ಊರಿಗೆ ಊರೇ ಸ್ತಬ್ಧವಾಗಿದೆ. ಬಿತ್ತನೆ ಕಾರ್ಯ ಮಾಡಬೇಕಿದ್ದ ರೈತರು ಮನೆ ಸೇರುವಂತಾಗಿದೆ. ದಡ್ಡಿ ಗ್ರಾಮದಿಂದ ಕೇವಲ ಮೂರು ಕಿ.ಮೀ ಅಂತರದಲ್ಲಿ ಮಹಾರಾಷ್ಟ್ರ ಗಡಿಯಿದೆ. ಕೊರೊನಾ ಆರಂಭದಲ್ಲಿ ಮಹಾರಾಷ್ಟ್ರದ ಪಕ್ಕದಲ್ಲಿದ್ದರೂ ಈ ಗ್ರಾಮದಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗಿರಲಿಲ್ಲ. …
Read More »ತರಕಾರಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ……….
ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಬಷೀರ್ ಎಂಬಾತ ಮೈಸೂರು ಜಿಲ್ಲೆಯ ಕೆ.ಆರ್ ನಗರದಿಂದ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದನು. ತರಕಾರಿ ಕೊಳ್ಳಲು ಹೋದ ಸಂದರ್ಭ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಗ್ರಾಮದವರಿಗೆ …
Read More »ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ…………
ಬೆಂಗಳೂರು, ಜೂ.15-ಕೊರೊನಾ ಮಹಾಮಾರಿ ಬೆಂಗಳೂರಿನ ಮೂಲೆ ಮೂಲೆಗಳಿಗೂ ವ್ಯಾಪಿಸುತ್ತಿದೆ. 198 ವಾರ್ಡ್‍ಗಳಲ್ಲಿ ಈಗಾಗಲೇ 122 ವಾರ್ಡ್‍ಗಳಿಗೆ ಮಹಾಮಾರಿ ಕಾಲಿಟ್ಟಿದ್ದು, 142 ಕಂಟೇನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ನಿನ್ನೆಯಿಂದೀಚೆಗೆ 32 ಕಂಟೈನ್‍ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಗರದ ಪ್ರತಿಯೊಂದು ರಸ್ತೆಗೂ ಬೀಳುತ್ತಿವೆ ಸೀಲ್‍ಡೌನ್ ಬ್ಯಾರಿಕೇಡ್‍ಗಳು. ನಗರದ ಎಂಟು ವಲಯಗಳಿಗೂ ಮಹಾಮಾರಿ ಹಬ್ಬುತ್ತಿದ್ದು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸೋಂಕು ತಡೆಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ …
Read More »ಅಶೋಕ ಚಂದರಗಿ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಒತ್ತಾಯ…………
ಬೆಳಗಾವಿ: ಬೆಳಗಾವಿಯ ಕನ್ನಡಪರ ಹೋರಾಟಗಾರರು, ಹಿರಿಯ ಪತ್ರಕರ್ತರು, ಸಾಮಾಜಿಕ ಚಿಂತಕರಾದ ಅಶೋಕ ಚಂದರಗಿ ಅವರನ್ನು ಸರಕಾರದಿಂದ ವಿಧಾನಪರಿಷತ್‍ಗೆ ನಾಮನಿರ್ದೇಶನ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ಮೆಹಬೂಬ್ ಮಕಾನಂದಾರ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿಯ ಜಿಪಂ ಸಭಾಂಗಣದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಮೆಹಬೂಬ್ ಮಕಾನಂದಾರ ಅಶೋಕ ಚಂದರಗಿ ಅವರು, ಹಲವಾರು ದಶಕಗಳಿಂದ ಕನ್ನಡ ಪರ ಹೋರಾಟ ಮಾಡುತ್ತ ಬಂದಿದ್ದಾರೆ. ಹಿರಿಯ …
Read More »ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ…?…
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಮಧ್ಯೆ ಮತ್ತೆ ಕದನ ಆರಂಭವಾಯಿತೋ ಎನ್ನಲಾಗುತ್ತಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಸಿದ್ದಾರೆ. ಸಭೆಯಲ್ಲಿ ನೀರು ಶುದ್ಧೀಕರಣ ಘಟಕದ ಬಗ್ಗೆ ಚರ್ಚೆ ನಡೆಯುವಾಗ ಸಚಿವ ಸುರೇಶ ಅಂಗಡಿಮಧ್ಯಪ್ರವೇಶಿಸಿ, ಅದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಚಾರದ ಕಾರ್ಯಕ್ರಮ, ಫೋಟೊ ಹಾಕಿಕೊಂಡ ಕಾರ್ಯಕ್ರಮ ಎಂದರು. ಇದಕ್ಕೆ …
Read More »ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ
ನವದೆಹಲಿ: ಪ್ರತಿ ನಿತ್ಯ ದೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೊರೊನಾ ಗಣನೀಯ ಏರಿಕೆಯ ನಡುವೆ ಒಳ್ಳೆ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಭಾರತದಲ್ಲಿ ಕೊರೊನಾದಿಂದ ಗುಣಮುಖವಾಗುತ್ತಿರುವ ಪ್ರಮಾಣ ಶೇ.51 ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ತನ್ನ ವೆಬ್‍ಸೈಟಿನಲ್ಲಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಭಾರತದಲ್ಲಿ 3,32,424 ಮಂದಿಯಲ್ಲಿ ಈವರೆಗೂ ಸೋಂಕು ಕಂಡು ಬಂದಿದೆ. ಈ ಪೈಕಿ 1,69,797 ಮಂದಿ ಚೇತರಿಸಿಕೊಂಡು ಗುಣಮುಖವಾಗಿದ್ದಾರೆ. ಸದ್ಯ 1,53,106 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ …
Read More »