Breaking News
Home / Tag Archives: laxminews (page 20)

Tag Archives: laxminews

ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ….:ಲಕ್ಷ್ಮಣ ಸವದಿ..

ಬೆಂಗಳೂರು : ಇಂಧನ ಕ್ಷಮತೆಗೆ ವಿಶೇಷ ಒತ್ತು ನೀಡಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯೂ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಣೆ ಮಾಡಿದೆ.ನಗರದ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ, ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಂದ ವಿಡಿಯೋ ಕಾನ್ಫರೆನ್ಸ್​ ನಡೆಸಲಾಯಿತು. ಈ ವೇಳೆ ಬಿಎಂಟಿಸಿ ಅಧ್ಯಕ್ಷ ಎನ್.ಎಸ್. ನಂದೀಶ್ ರೆಡ್ಡಿ, ನಿರ್ದೇಶಕಿ ಶಿಖಾ ಹಾಗೂ ಕೆಎಸ್​ಆರ್​ಟಿಸಿಯ …

Read More »

ಮೇ.17ರ ವರೆಗೂ ಲಾಕ್‌ಡೌನ್‌ ಮುಂದುವರಿಕೆ, ಹೊಸ ಮಾರ್ಗಸೂಚಿಯಲ್ಲಿ ಏನೇನಿದೆ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನವದೆಹಲಿ : ಕೊರೊನಾ ಮಹಾಮಾರಿಯನ್ನು ಸಂಪೂರ್ಣವಾಗಿ ನಿಯಂತ್ರಣ ತರುವ ಉದ್ದೇಶದಿಂದ ದೇಶದಲ್ಲಿ ಮತ್ತೆ 2 ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಈ ಬಾರಿ ಪ್ರಧಾನಿ ಭಾಷಣ ಇಲ್ಲದೇ ಗೃಹ ಇಲಾಖೆ ಅಧಿಕಾರಿಗಳೇ ಈ ವಿಷಯವನ್ನು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಎರಡು ಬಾರಿ ಲಾಕ್ ಡೌನ್ ಘೋಷಿಸಿತ್ತು. ಇದೀಗ ಮೂರನೇ ಬಾರಿಗೆ 2 ವಾರಗಳವರೆಗೂ ಲಾಕ್ ಡೌನ್ ವಿಸ್ತರಿಸಿ …

Read More »

ಕ್ವಾರಂಟೈನ್‍ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….

ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …

Read More »

ಹುಬ್ಬಳ್ಳಿಯ ಮುಲ್ಲಾ ಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ……..

ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಯ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸ್‌ಗಿರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದು ಯೋಗ ಮಾಡುತ್ತಿರುವ ಬಾಲೆಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರು ವರ್ಷದ ಇಫ್ರಾ ಮುಲ್ಲಾ‌ ತನ್ನ ಮನೆಯಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಳು. ಟಿವಿ ನೋಡುತ್ತಾ ಯೋಗ ಕಲಿಯುತ್ತಿದ್ದಳು. ಇದನ್ನು ಇಫ್ರಾ ತಾಯಿ ವಿಡಿಯೋ ಚಿತ್ರೀಕರಿಸಿದ್ದರು. ನಂತರ ಇಫ್ರಾ  ತಂದೆ ಇಮ್ತಿಯಾಜ್‌ ಅಹ್ಮದ್ ಮುಲ್ಲಾಗೆ ಈ ವಿಡಿಯೋ ಕಳಿಸಿದ್ದರು. ರೈಲ್ವೇ ಉದ್ಯೋಗಿಯಾಗಿರುವ ಇಮ್ತಿಯಾಜ್‌ಅಹ್ಮದ್ ಮುಲ್ಲಾ ಮಗಳ ಯೋಗಾಭ್ಯಾಸದ ವಿಡಿಯೋ …

Read More »

ಕೊನೆಗೂ ಭೇಟಿಯಾಗಲು ಸಾಧ್ಯವಾಗಿಲ್ಲ- ಬುಲೆಟ್ ನಿಧನಕ್ಕೆ ಕಿಚ್ಚ ಸಂತಾಪ

ಬೆಂಗಳೂರು: ಸ್ಯಾಂಡಲ್‍ವುಡ್ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನಕ್ಕೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದು, ಕೊನೆಯ ಬಾರಿಗೆ ಅವರನ್ನು ನೋಡಲು ಆಗಲಿಲ್ಲ ಎಂದು ಬೆಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ನನ್ನ ಸ್ನೇಹಿತ ಬುಲೆಟ್ ಪ್ರಕಾಶ್ ಇನ್ನಿಲ್ಲ ಎಂದು ಕೇಳಿದಾಗ ಬೇಸರವಾಯಿತು. ಇನ್ನೂ ಹೆಚ್ಚು ದುಃಖಕರವಾದ ಸಂಗತಿಯೆಂದರೆ ಸಿನಿಮಾ ಉದ್ಯಮದ ಸ್ನೇಹಿತರು ಕೊನೆಯ ಬಾರಿಗೆ ಅವರನ್ನು ನೋಡಲು ಅವರ ಮನೆಗೆ ಭೇಟಿ ನೀಡಲು ಸಾಧ್ಯವಿಲ್ಲ. …

Read More »

ಗಡಿ ಬಂದ್‍ನಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ- ಸುಪ್ರೀಂಗೆ ಕೇರಳ ಮಾಹಿತಿ

ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಬಂದ್ ಮಾಡಲಾಗಿದ್ದು, ಪರಿಣಾಮ ಕೇರಳದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿದೆ. ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇರಳ ಸರ್ಕಾರ, ಕೂಡಲೇ ಗಡಿ ಭಾಗವನ್ನು ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿಕೊಂಡಿದೆ. ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮತ್ತಷ್ಟು ಮಾಹಿತಿ …

Read More »

ಲಾಕ್‍ಡೌನ್‍ನಿಂದ ಕಾಂಡಿಮೆಂಟ್ಸ್, ಬೇಕರಿಗಳಿಗೆ ವಿನಾಯ್ತಿ ನೀಡಿದ ರಾಜ್ಯ ಸರ್ಕಾರ

ಭಾರತ ಲಾಕ್‍ಡೌನ್ ನಡುವೆ ರಾಜ್ಯದಲ್ಲಿ ಬೇಕರಿ, ಕಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿ ತಿನಿಸುಗಳ ತಯಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಬೇಕರಿಯ ತಿಂಡಿ ತಿನಿಸುಗಳು, ಅವುಗಳಲ್ಲಿ ಪ್ರಮುಖವಾಗಿ ಬ್ರೆಡ್ ಹಾಗೂ ಬಿಸ್ಕೆಟ್‍ಗಳನ್ನ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿನ ರೋಗಿಗಳು ಹಾಗೂ ವಯಸ್ಸಾದವರು ಸೇರಿದಂತೆ ಮಕ್ಕಳು ಹಾಗೂ ಸಾಮಾನ್ಯ ಜನ ಸಹ ತಿನ್ನುತ್ತಾರೆ. ಹೀಗಾಗಿ ಬೇಕರಿ ತಿಂಡಿ ತಿನಿಸುಗಳ ಅವಶ್ಯಕತೆ ಇರುವ ಕಾರಣ ಬೇಕರಿ ಹಾಗೂ ಕಾಂಡಿಮೆಂಟ್ಸ್ ಗಳಿಗೆ …

Read More »

ಕೊರೊನಾ ಎಫೆಕ್ಟ್- ಮದ್ಯ ಸಿಗದಿದ್ದಕ್ಕೆ ಊಟ ಬಿಟ್ಟು ವ್ಯಕ್ತಿ ಸಾವು

ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ಊಟ ತ್ಯಜಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದ ನಿವಾಸಿ ಗುಂಡೇಗೌಡ (32) ಮೃತ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಗುಂಡೇಗೌಡ ಮದ್ಯದಂಗಡಿ ಮುಚ್ಚಿದಾಗಿನಿಂದ ಎಣ್ಣೆಗಾಗಿ ಹುಡುಕಾಡ ನಡೆಸಿದ್ದ. ಆದರೆ ಮದ್ಯ ಸಿಗದೆ ಇದ್ದ ಕಾರಣ …

Read More »

ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …

Read More »