Breaking News
Home / Tag Archives: laxminews (page 5)

Tag Archives: laxminews

ಬೆಳಗಾವಿ ಮಹಾನಗರದಲ್ಲಿ ಬುಧವಾರದಿಂದ ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯ

ಬೆಳಗಾವಿ – ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ. ಈ ನಿಯಮವನ್ನು ಬೆಳಗಾವಿ ಮಹಾನಗರದಲ್ಲಿ ಬುಧವಾರ (7-10-2020) ದಿಂದ ಜಾರಿಗೊಳಿಸಲು ಪೊಲೀಸ್ ಆಯುಕ್ತಾಲಯ ನಿರ್ಧರಿಸಿದೆ. ಈ ಕುರಿತು ಪೊಲೀಸ್ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಬುಧವಾರದಿಂದ ಮಾಸ್ಕ್ ಧರಿಸದೆ ಹೊರಗೆ ಹೋದಲ್ಲಿ ಒಂದು ಸಾವಿರ ರೂ. ದಂಡ ಕಟ್ಟುವುದು ಅನಿವಾರ್ಯವಾಗಲಿದೆ. …

Read More »

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು …

Read More »

ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.ಕೊರೊನಾ ಅನ್‍ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಹೀಗಾಗಿ ಇಂದು ಬೆಳಗ್ಗೆ 06 ಗಂಟೆಯಿಂದಲೇ ನಂದಿಗಿರಿಧಾಮ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಮಿಥುನ್ …

Read More »

ಡುಪ್ಲೆಸಿಸ್, ವ್ಯಾಟ್ಸನ್ ಅದ್ಭುತ ಬ್ಯಾಟಿಂಗ್- ಗೆದ್ದು ಬೀಗಿದ ಚೆನ್ನೈ

ದುಬೈನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 179 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಪಂಜಾಬ್ ತಂಡದ ಬೌಲರ್ ಗಳನ್ನು ಧೂಳೀಪಟ ಮಾಡಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಫಾಫ್ ಡು’ಪ್ಲೆಸಿಸ್ ಹಾಗೂ ಶೇನ್ ವ್ಯಾಟ್ಸನ್ ಭರ್ಜರಿ ಜೊತೆಯಾಟವಾಡುವ ಮೂಲಕ ಬೌಲರ್ ಗಳ ಬೆವರಿಳಿಸಿದರು. ಫಾಫ್ ಡು’ಪ್ಲೆಸಿಸ್, ಶೇನ್ ವ್ಯಾಟ್ಸನ್ ತಾ ಮುಂದು ನಾ ಮುಂದು …

Read More »

ಪೊಲೀಸರಿಂದ್ಲೇ ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆ – ಸಿದ್ದರಾಮಯ್ಯ, ದಿನೇಶ್ ಕಿಡಿ

ಬೆಂಗಳೂರು: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪೊಲೀಸರೇ ನೆರವೇರಿಸಿದ್ದಕ್ಕೆ ಇದೀಗ ದೇಶದ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಕೂಡ ಯೋಗಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ …

Read More »

ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತ

ಬೆಂಗಳೂರು: ಡ್ರಗ್ಸ್ ನಶೆಯ ನಂಟಲ್ಲಿ ಜೈಲಿ ಸೇರಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ED ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ಗಲ್ರಾನಿ ವಿಚಾರಣೆ ನಡೆದಿದೆ. ಸಂಜನಾ ಬಿಟ್ ಕಾಯಿನ್ ವ್ಯವಹಾರದಲ್ಲಿ ಭಾಗಿ?: ಹವಾಲಾ ದಂಧೆಯಲ್ಲಿ ಹಣ ತೊಡಗಿಸಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ED …

Read More »

ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ:

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್​ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ …

Read More »

10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …

Read More »

ಸರಳವಾಗಿ ವಿವಾಹವಾದ ಅಂತಾರಾಷ್ಟ್ರೀಯ ಹಾಕಿ ಆಟಗಾರ

ಮಡಿಕೇರಿ: ಅಂತಾರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ಎಸ್.ಕೆ.ಉತ್ತಪ್ಪ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್‍ವೊಂದರಲ್ಲಿ ಸರಳವಾಗಿ ಕೇವಲ ಬೆರಳೆಣಿಕೆಯಷ್ಟು ಕುಟುಂಬ ಸದಸ್ಯ ಒಳಗೊಂಡು ಮದುವೆ ಕಾರ್ಯಕ್ರಮ ನಡೆದಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಕೊಡಗಿನ ಮೂಲದ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಈ ಜೋಡಿ ಹಸೆಮಣೆಯೇರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದ್ದು, ಕುಟುಂಬದವರು ಮತ್ತು …

Read More »

ದಸರಾಗೆ ದಿನಗಣನೆ ಆರಂಭ ಚೈನಾ ಬಲ್ಬ್‌ಗಳನ್ನು ಬ್ಯಾನ್ ಮಾಡಲಾಗಿದೆ.

ಮೈಸೂರು: ಈಗ ದೇಶದೆಲ್ಲೆಡೆ ಆತ್ಮ ನಿರ್ಭರ ಭಾರತದ ಸದ್ದಿದೆ. ಈ ಬಾರಿ ದಸರೆಯಲ್ಲೂ ಆತ್ಮ ನಿರ್ಭರ ಭಾರತದ ಮಾತು ಬೆಳಕಿನ ರೂಪದಲ್ಲಿ ಪ್ರಜ್ವಲಿಸಲಿದೆ. ಅಂದರೆ ದಸರಾಗೆ ಚೈನಾ ಬಲ್ಬ್‌ಗಳನ್ನು ಬ್ಯಾನ್ ಮಾಡಲಾಗಿದೆ.ದಸರಾಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ದಸರಾ ಸಿದ್ಧತೆಯೂ ಜೋರಾಗಿದೆ. ಅರಮನೆಯ ದೀಪಾಲಂಕಾರಕ್ಕಾಗಿ ಬಲ್ಬ್‌ಗಳ ಪರಿಶೀಲನೆ ಹಾಗೂ ಕೆಟ್ಟು ಹೋದ ಬಲ್ಬ್‌ಗಳನ್ನು ಬದಲಾಯಿಸುವ ಕೆಲಸ ಆರಂಭವಾಗಿದೆ. ಈ ಬಾರಿ ಮೈಸೂರು ದಸರಾ ದೀಪಾಲಂಕಾರದ ವಿಶೇಷತೆಯೆಂದರೆ ಆತ್ಮ ನಿರ್ಭರ ಭಾರತಕ್ಕೆ ಒತ್ತು …

Read More »