Breaking News

Tag Archives: laxminews

ಮಾಳ ಮಾರುತಿ ಪೋಲೀಸರು ಗಾಂಜಾ ಮಾರಾಟಗಾರರ ಸೆರೆ ಹಿಡಿದಿದ್ದು,   5.5 ಕೆಜಿ ಗಾಂಜಾ ಜಪ್ತಿ‌ ಮಾಡಿ  ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ:  ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ‌ನಡೆಸಿದ್ದು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು  ಪ್ರತ್ಯೇಕ ಪ್ರಕರಣ  ಭೇದಿಸಿದ್ದಾರೆ. ಎಸಿಪಿ ನಾರಾಯಣ ಬರಮನಿ ಅವರ ಮಾರ್ಗದರ್ಶನದಲ್ಲಿ ನಗರದ ಬಾಯಪಾಸ್ ಸಮೀಪ್ ಹೋಲ್ ಸೆಲ್ ಹಣ್ಣು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ   ಇಬ್ಬರನ್ನು ಕಿಂಕ್ ಪೀನ್ ಗಳನ್ನು ಬಂಧಿಸಿ ಒಟ್ಟು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. …

Read More »

ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕು – ಮೋದಿ

ನವದೆಹಲಿ: ಹಿಂದಿನ ಸರ್ಕಾರಗಳು ರೈತರಿಗೆ ಮತ್ತು ಕಾರ್ಮಿಕರಿಗೆ ಅರ್ಥವಾಗದ ಭರವಸೆ ಮತ್ತು ಕಾನೂನುಗಳನ್ನು ರೂಪಿಸಿದೆ. ಅದನ್ನು ಬದಲಿಸಲು ಎನ್‍ಡಿಎ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕಿದ್ದು, ಬಿಜೆಪಿ ಕಾರ್ಯಕರ್ತರು ರೈತರ ಬಳಿ ಹೋಗಿ ಸುಲಭ ಭಾಷೆಯಲ್ಲಿ ಅರ್ಥೈಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಹಿನ್ನಲೆಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ …

Read More »

ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣನ ಅಬ್ಬರ.

ಬೆಂಗಳೂರು: ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಯಾದಗಿರಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮಳೆ ಅರ್ಭಟಕ್ಕೆ ಜನರು ತಲ್ಲಣಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ, ಖಾನಾಪುರ ಎಸ್ ಗ್ರಾಮದೊಳಗೆ ನೀರು ನುಗ್ಗಿದೆ. 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ತಡರಾತ್ರಿಯಿಂದ ನಿದ್ದೆ ಮಾಡದೆ ಜನರು ಹೈರಾಣಾಗಿದ್ದಾರೆ. ನಗನೂರ ಗ್ರಾಮದ …

Read More »

ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ

ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ.   ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ …

Read More »

Latest 3 ವಿಕೆಟ್‌ ಕಿತ್ತು ರೋಚಕ ತಿರುವು ನೀಡಿದ ಚಹಲ್‌ –R.C.B.10 ರನ್‌ಗಳ ಗೆಲುವು

ದುಬೈ: ಆರಂಭದಲ್ಲಿ ಬ್ಯಾಟ್ಸ್‌ ಮನ್‌, ನಂತರ ಬೌಲರ್‌ಗಳ ಉತ್ತಮ ಪ್ರದರ್ಶನದಿಂದ ಹೈದರಾಬಾದ್‌ ಸನ್‌ ರೈಸರ್ಸ್‌ ವಿರುದ್ಧದ ನಡೆದ ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 10 ರನ್‌ಗಳಿಂದ ಜಯಗಳಿಸಿದೆ.ಗೆಲ್ಲಲು 164 ರನ್‌ಗಳ ಗುರಿಯನ್ನು ಪಡೆದ ಹೈದರಾಬಾದ್‌ 19.4 ಓವರ್‌ ಗಳಲ್ಲಿ 153 ರನ್‌ಗಳಿಗೆ ಆಲೌಟ್‌ ಆಯ್ತು. ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಮೂರು ವಿಕೆಟ್‌ ಕಬಳಿಸಿ ಪಂದ್ಯಕ್ಕೆ ರೋಚಕ ತಿರುವ ನೀಡಿದರೆ ಸೈನಿ ಎರಡು ವಿಕೆಟ್‌ ಕೀಳುವ ಮೂಲಕ ಆರ್‌ಸಿಬಿ …

Read More »

ಲೂಸ್ ಮಾದ, ಕ್ರಿಕೆಟಿಗ ಅಯ್ಯಪ್ಪ, ಸೇರಿದಂತೆ ಕೆಲ ಗಣ್ಯರ ಮಕ್ಕಳಿಗೆ ಡ್ರಗ್ಸ್ ಸಪ್ಲೈ ಇಬ್ಬರಿಗೆ ನೋಟಿಸ್

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್‍ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಅವರು, ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಲೂಸ್ ಮಾದ ಖ್ಯಾತಿಯ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ಮಾಡಿದ್ದೇವೆ. ಯೋಗಿ, ಅಯ್ಯಪ್ಪ ಅಲ್ಲದೇ ಸೀರಿಯಲ್‌ …

Read More »

ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್:ಇಂದ್ರಜಿತ್

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು …

Read More »

ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ

ಬೆಂಗಳೂರು: ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪ ನಡೆದಿದೆ. ಕೊಲೆಯಾದ ಯುವಕನನ್ನು ರಾಜೇಶ್ (35) ಎಂದು ಗುರುತಿಸಲಾಗಿದೆ. ರಾಜೇಶ್ ಒಂದು ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ನಂತರ ಆ ಯುವತಿಯನ್ನು ಪ್ರೀತಿಯನ್ನು ನಿರಾಕರಣೆ ಮಾಡಿದ್ದ. ಇದರಿಂದ ಮನನೊಂದ ಯುವತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ, ನನ್ನ ತಂಗಿಯ ಬಾಳು ಈತನಿಂದಲೇ ಹಾಳಾಯ್ತು ಎಂದು ರಾಜೇಶ್ …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯ,ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ.

ಬೆಂಗಳೂರು: ಕತ್ತಲಾದ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯವಾಗುತ್ತದೆ. ಆದರೆ ಇಲ್ಲೊಬ್ಬ ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ ಮಾಡುವುದು ಅಪರಾಧವಾದರೂ ಯುವಕರು ಶೋಕಿಗಾಗಿ ವೀಲಿಂಗ್ ಮಾಡುತ್ತಿರುತ್ತಾರೆ. ಆದರೆ ಯುವಕ ವೀಲಿಂಗ್ ಮಾಡುವಾಗ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಕೈಯಲ್ಲಿ ಡ್ರ್ಯಾಗರ್ ಹಿಡಿದು ಭಯ ಹುಟ್ಟಿಸುವಂತೆ ಪೋಸ್ ನೀಡಿದ್ದಾಳೆ. ಯುವತಿಯ ಈ ವಿಡಿಯೋ ಸಾಮಾಜಿಕ …

Read More »

ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್

ಶಿವಮೊಗ್ಗ: ರಾಜ್ಯದ ಬಹುತೇಕ ಕಡೆ ವರುಣ ಅಬ್ಬರಿಸಿದ್ದು, ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ಆಗುಂಬೆ ಬಳಿ ಸಹ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಶಿವಮೊಗ್ಗ-ಆಗುಂಬೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮಾಲತಿ ಮತ್ತು ಸೀತಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಅಪಾರ ಪ್ರಮಾಣದ ನೀರು ಆಗುಂಬೆಯ ಭಾಗಗಳ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಶಿವಮೊಗ್ಗ-ಆಗುಂಬೆ-ಮಂಗಳೂರು ಎನ್.ಹೆಚ್ 169-ಎ …

Read More »