ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್‍ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್‍ಟಿ ಪರಿಹಾರ ಬಾಕಿ, ಲಾಕ್‍ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »ಕಾರಜೋಳರು ಬರೆದ ಪತ್ರಕ್ಕೆ ಒಂದು ತಿಂಗಳು ತುಂಬುವ ಮೊದಲೇ ಮಲಪ್ರಭೆಯ ” ವಿಮೋಚನೆ” ಗೆ ಕೈ ಹಾಕಿದ ರಮೇಶ ಜಾರಕಿಹೊಳಿ!
ಕಳೆದ ಅಗಷ್ಟ 23 ರಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಪಿಡಬ್ಲುಡಿಖಾತೆಯ ಸಚಿವ ಶ್ರೀ ಗೋವಿಂದಕಾರಜೋಳರು ಮಲಪ್ರಭೆಯ ಅತಿಕ್ರಮಣತೆರವುಗೊಳಿಸುವ ಸಂಬಂಧ ನೀರಾವರಿನೀರಾವರಿಸಚಿವರಿಗೆ ಬರೆದ ಪತ್ರಕ್ಕೆಒಂದು ತಿಂಗಳು ತುಂಬುವ ಮುನ್ನವೇಬೆಳಗಾವಿಯ ಸುವರ್ಣಸೌಧದಲ್ಲಿಸಪ್ಟೆಂಬರ್ 20 ರಂದು ಉನ್ನತ ಮಟ್ಟದ ಸಭೆ ನಡೆದಿರುವದು ಮಲಪ್ರಭೆ ತೀರದ ಜನತೆಯಲ್ಲಿ ಹೊಸ ಆಶಾಭಾವನೆ ಉಂಟು ಮಾಡಿದೆ. ನೀರಾವರಿ ಸಚಿವ ಶ್ರೀ ರಮೇಶ ಜಾರಕಿಹೊಳಿ ಅವರು ನಿನ್ನೆ ಶನಿವಾರ ನಡೆಸಿದ ಸಭೆಯು ಬೆಳಗಾವಿ,ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳ ಏಳು ತಾಲೂಕುಗಳ …
Read More »ರಾಜ್ಯಸಭಾ ಸದಸ್ಯರಾಗಿ ದೇವೇಗೌಡರು ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮತ್ತು ಜಾತ್ಯಾತೀತ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಹೀಗಾಗಿ ದೇವೇಗೌಡರು ಶನಿವಾರ ರಾತ್ರಿಯೇ ದೆಹಲಿಗೆ ಹೋಗಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಎಚ್.ಡಿ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾದ ಬಳಿಕ …
Read More »ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ
ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು …
Read More »ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ: ಪ್ರಶಾಂತ್ ಸಂಬರಗಿ
ಬೆಂಗಳೂರು: ಕನ್ನಡ ಚಿತ್ರರಂಗ ದಿನ ದಿನಕ್ಕೆ ಒಂದೊಂದೇ ಹೆಸರುಗಳನ್ನು ಕೇಳಿ ಬೆಚ್ಚುತ್ತಿದೆ. ಈಗಾಗಲೇ ಖಾಕಿ ಪಡೆ ಸ್ಯಾಂಡಲ್‍ವುಡ್ ಕೆಲವು ನಟ-ನಟಿಯರನ್ನು ಡ್ರಗ್ಸ್ ಜಾಲದ ವಿಷಯದಲ್ಲಿ ಕರೆದು ವಿಚಾರಣೆ ನಡೆಸಿದ್ದು, ಈಗಲೂ ನಡೆಸುತ್ತಿದೆ. ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ ಎಂದು ಗುಡುಗಿದ್ದಾರೆ. ಹೌದು. ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಡ್ರಗ್ಸ್ ಸುಂಟರಗಾಳಿ ಇನ್ನೂ …
Read More »ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ……..?
ಬೆಂಗಳೂರು: ಡ್ರಗ್ಸ್ ಕೇಸ್ಸಲ್ಲಿ ಬಂಧಿತರಾಗಿರೋ ಸಂಜನಾ ಹಾಗೂ ರಾಗಿಣಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರೋದು ಬಹಿರಂಗವಾಗಿದೆ. ಇದೀಗ ಜೈಲಲ್ಲಿ ಈ ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೋರ್ಟ್ ಆದೇಶ ಇಲ್ಲದೇ ಆರೋಪಿಗಳಿಗೆ ಜೈಲು ಸಿಬ್ಬಂದಿಯೊಬ್ಬರ ಮನೆಯಿಂದ ನಿತ್ಯ ರುಚಿ ರುಚಿಯಾದ ಊಟ ಪೂರೈಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸಾಮಾನ್ಯರಿಗೆ ಒಂದು ಕಾನೂನು, ಸೆಲೆಬ್ರಿಟಿಗಳಿಗೆ ಒಂದು ಕಾನೂನಾ ಅನ್ನೋ ಪ್ರಶ್ನೆ ಎದ್ದಿದೆ. ಇತ್ತ ಕಳೆದ ನಾಲ್ಕು …
Read More »ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿ
ದಾವಣಗೆರೆ: ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ತೋಗಟವೀರ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಪ್ರಕಾಶ್ ಎಂಬುವರು ತೊಗಟವೀರ ಕಲ್ಯಾಣ ಮಂಟಪದ ಬಳಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಆದರೆ ಪ್ರಕಾಶ್ ವಾಪಸ್ ಬರುವಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ದುಷ್ಕರ್ಮಿಗಳು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ತಕ್ಷಣ ಪ್ರಕಾಶ್ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ …
Read More »ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ. ಸೂಕ್ತ …
Read More »ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ …
Read More »ಮಳೆ ನೀರಲ್ಲಿ ಕೊಚ್ಚಿ ಹೋದ ಯುವಕ……
ಬೆಂಗಳೂರು: ರಾಜ್ಯದ ಹಲವೆಡೆ ಇಂದು ವರುಣ ಅಬ್ಬರಿಸಿದ್ದು, ಬೀದರ್ ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಮಳೆ ನೀರಿನ ರಭಸಕ್ಕೆ ಯುವಕ ಕೊಚ್ಚಿಹೋಗಿದ್ದು, ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ್ದಿದ್ದು, ಅಫಜಲಪುರ್, ಆಳಂದ, ಚಿಂಚೋಳಿಯ ಹಲವು ಗ್ರಾಮಗಳು ಜಲಾವೃತವಾಗಿವೆ. ಅಲ್ಲದೆ ಜಿಲ್ಲೆ ಆಳಂದ ತಾಲೂಕಿನ ಬೊಮ್ಮನಹಳ್ಳಿ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಮೃತ ಯುವಕ ಸಿದ್ದರಾಜು ಅಫಜಲಪುರ ಜೆಸ್ಕಾಂನಲ್ಲಿ ಎಇಇ …
Read More »